ಬೆಂಗಳೂರು – ಉದ್ಯಾನ ನಗರಿ ಸಿಲಿಕಾನ್ ಸಿಟಿ ಎಂದು ಖ್ಯಾತಿ ಪಡೆದಿರುವ ರಾಜಧಾನಿ ಮಹಾನಗರಿ ಬೆಂಗಳೂರಿನಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಫ್ಲೆಕ್ಸ್ ಪೋಸ್ಟರ್ ಬ್ಯಾನರ್ ಅಳವಡಿಸಿದರೆ ಜೋಕೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಜೊತೆಗೆ ದಂಡ ಕೂಡ ವಿಧಿಸಲಾಗುತ್ತದೆ.
ಇತ್ತೀಚೆಗೆ ನಗರದ ಹಲವು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳು ಆರಾಧಿಸುತ್ತಿದ್ದು ರಾರಾಜಿಸುತ್ತಿದ್ದು ನಗರದ ಸೌಂದರ್ಯಕ್ಕೆ ತರುವ ಜೊತೆಗೆ ಪರಿಸರದ ಮೇಲೂ ದುಷ್ಪರಿಣಾಮ ಪರಿಣಾಮ ಬೀರುತ್ತಿದೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಹೈಕೋರ್ಟ್ ಫ್ಲೆಕ್ಸ್ ಹಾವಳಿಯನ್ನು ತಡೆಗಟ್ಟಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತಾಕೀತು ಮಾಡಿದೆ. ಇದನ್ನು ಚಾಚು ತಪ್ಪದೇ ಪಾಲಿಸಲು ಮುಂದಾಗಿರುವ ಬೆಂಗಳೂರು ನಗರ ಅಭಿವೃದ್ಧಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು. ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.
ಈ ಸಂಬಂಧ ಬಿಬಿಎಂಪಿ ಹಾಗು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ತೆರವಿಗೆ ಕೋರ್ಟ್ ಮೂರು ವಾರಗಳ ಗಡವು ನೀಡಿದೆ. ಇದನ್ನು ಚಾಚೂ ತಪ್ಪದೇ ಪಾಲಿಸಬೇಕು ಇನ್ನು ಮುಂದೆ ನಗರದಲ್ಲಿ ನನ್ನದೂ, ಮುಖ್ಯಮಂತ್ರಿಗಳದ್ದೂ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಎಲ್ಲ ಅನಧಿಕೃತ ಫ್ಲೆಕ್ಸ್ ಗಳನ್ನು ನಿಷೇಧಿಸಲಾಗುವುದು. ಈ ವಿಚಾರವಾಗಿ ನಮ್ಮ ಸಚಿವರು ಹಾಗೂ ನಾಯಕರಿಗೆ ಮನವಿ ಮಾಡಿದ್ದೇನೆ. ಫ್ಲೆಕ್ಸ್ ನಿಷೇಧ ಕುರಿತು ಮುಂದಿನ ದಿನಗಳಲ್ಲಿ ನೀತಿ ರೂಪಿಸುತ್ತೇವೆ ಎಂದು ಹೇಳಿದರು
ಇನ್ನು ಮುಂದೆ ಜನ್ಮದಿನ, ಶ್ರದ್ಧಾಂಜಲಿ, ಶುಭ ಸಂದೇಶ, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ವಿಚಾರ ಸೇರಿದಂತೆ ಯಾವುದೇ ಅನಧಿಕೃತ ಫ್ಲೆಕ್ಸ್ ಹಾಕುವಂತಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳು ಹಾಗೂ ನಾಗರೀಕರು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ. ಸರ್ಕಾರದಿಂದ ಫ್ಲೆಕ್ಸ್ ಹಾಕುವುದಿದ್ದರೆ, ಸಮಯ, ಅಳತೆ, ಸ್ಥಳ ನಿಗದಿ ಮಾಡಿ ಅನುಮತಿ ನೀಡಲಾಗುವುದು. ಇದಕ್ಕೂ ನೀತಿ ರೂಪಿಸಲಾಗುತ್ತಿದೆ. ಈಗಾಗಲೇ ನಗರದಲ್ಲಿ 59 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ. 134 ದೂರುಗಳು ಬಂದಿದ್ದು, 40 ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು ಖಾಸಗಿ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕಲು ನಿರ್ಬಂಧ ಇರುವುದಿಲ್ಲ. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.


6 ಪ್ರತಿಕ್ರಿಯೆಗಳು
mgm sportsbook promos online casino betmgm play betmgm casino pa login
Sweet Bonanza brings the candy shop to life with high-stakes tumbling action. Multipliers how to play sweet bonanza up to 100x make every bonus round epic. Get your sugar fix!
Feel the primal pulse of pure payout power. buffalo gold slot machine bonus features 1024 lines, retriggers, and buffalo gold jackpots. Conquer!
Sign up at chumba casino free sweeps and get free Sweeps Coins instantly. Enjoy premium slots, daily bonuses, and the chance to redeem real rewards. Play now!
No middleman. No delays. Just you, your crypto, and massive wins on stake promo code . Join now and see why everyone’s talking about it.
Elevate your casino play with DraftKings casino West Virginia. Wager $5 to get 500 bonus spins and up to $1K lossback on day one. Hundreds of games, endless excitement!