ಮಂಗಳೂರು,ಜೂ.15– ನಗರದ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.36 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಓರ್ವ ಮಹಿಳಾ ಪ್ರಯಾಣಿಕೆ ಸೇರಿದಂತೆ ಇಬ್ಬರು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದರು. ಆರೋಪಿಗಳ ಬಳಿ 24 ಕ್ಯಾರೆಟ್ ಪರಿಶುದ್ಧತೆಯ 1.36 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ. ಚಿನ್ನ ಮತ್ತು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಒಂದು ಪ್ರಕರಣದಲ್ಲಿ ದುಬೈನಿಂದ ಬಂದ ಒಬ್ಬ ಪ್ರಯಾಣಿಕನಿಂದ 964 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 49.74 ಲಕ್ಷ ರೂ. ಆಗಿದೆ. ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳಾ ಪ್ರಯಾಣಿಕರಿಂದ 1.684 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಇದರ ಮೌಲ್ಯ 86,89,440 ರೂ. ಆಗಿದೆ. ಈಕೆ ಒಳವಸ್ತ್ರ ಮಾದರಿಯ ಬಟ್ಟೆಯಲ್ಲಿ ಹಾಗೂ ಸ್ಯಾನಿಟರಿ ಪ್ಯಾಡ್ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.