ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ
    ಪ್ರಚಲಿತ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    vartha chakraBy vartha chakraಏಪ್ರಿಲ್ 5, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಹಿಂದಿ ಸೇರಿದಂತೆ ಎಲ್ಲಾ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿರುವ ರಾಜ್ಯಪಾಲ ತಾವರ ಚೆಂದ್ ಗೆಹ್ಲೋಟ್ ಅವರ ನಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಕೆಂಡ ಕಾರಿದೆ.
    ರಾಜ್ಯ ಸರ್ಕಾರ ತನ್ನ ನಿರ್ಧಾರ ವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್‌ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಮಾಡಬಹುದು ಎಂದು ರಾಜ್ಯಪಾಲರು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವುದನ್ನು ವೇದಿಕೆ ಅಧ್ಯಕ್ಷ ನಾರಾಯಣಗೌಡ ಬಲವಾಗಿ ಖಂಡಿಸಿದ್ದಾರೆ.
    ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ” ಎಂದಿದ್ದಾರೆ.
    “ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ” ಎಂದು ಹೇಳಿದ್ದಾರೆ.
    “ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ” ಎಂದು ವಿವರಿಸಿದ್ದಾರೆ.
    “ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ” ಎಂದಿದ್ದಾರೆ.
    ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ. ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ರಾಜ್ಯಪಾಲ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದಿನಗೂಲಿ ನೌಕರರಿಗೆ ಬಂಪರ್!
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Kevinjoync ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Kevinjoync ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.