Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಗಿಲಿಗೆ ಬರಲಿದೆ ಸರ್ಕಾರ
    ಸುದ್ದಿ

    ಬಾಗಿಲಿಗೆ ಬರಲಿದೆ ಸರ್ಕಾರ

    vartha chakraBy vartha chakraಡಿಸೆಂಬರ್ 29, 202360 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ. 29: ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಇದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕನಸಿನ ಕಾರ್ಯಕ್ರಮ.
    ತಮ್ಮ ಅಗತ್ಯಗಳಿಗಾಗಿ ಬೆಂಗಳೂರಿನ ನಾಗರೀಕರು ಅಹವಾಲುಗಳನ್ನು ಹಿಡಿದು ಬಿಬಿಎಂಪಿ, ಜಲ ಮಂಡಳಿ, ಬೆಸ್ಕಾಂ,ಬಿಡಿಎ ಮೊದಲಾದ ಕಚೇರಿಗಳಿಗೆ ಎಡತಾಕುವುದು.ಅಧಿಕಾರಿಗಳ ಕಚೇರಿ ಬಾಗಿಲು ಕಾಯುವುದು ಮಾಮೂಲು. ಇಷ್ಟಾದರೂ ಕೆಲವರ ಕೆಲಸ ಆದರೆ,ಆದೀತು ಇಲ್ಲವಾದರೆ ಇಲ್ಲ.ಇದಕ್ಕಾಗಿ ನಾಗರೀಕರು ಪಡುವ ಬವಣೆ ಅಷ್ಟಿಷ್ಟಲ್ಲ.

    ಇದನ್ನು ತಪ್ಪಿಸಲು ಇದೀಗ ಡಿ.ಕೆ.ಶಿವಕುಮಾರ್ ಅವರು, ಜನ ಸಾಮಾನ್ಯರು ಅಹವಾಲು ಹಿಡಿದು
    ನಮ್ಮ ಮನೆವರೆಗೂ ತರುವುದನ್ನು ತಪ್ಪಿಸಿ, ಸರ್ಕಾರವೇ ಅವರ ಬಳಿಗೆ ಹೋಗಿ ಅವರ ಸಮಸ್ಯೆ ಆಲಿಸಲು ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.
    ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
    ಜನವರಿ 3 ರಿಂದ ತಿಂಗಳಾಂತ್ಯದವರೆಗೂ 10 ದಿನಗಳ ಕಾಲ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನ ಎರಡು ಮೂರು ವಿಧಾನಸಭಾ ಕ್ಷೇತ್ರಗಳ ಜನರ ಅಹವಾಲು ಆಲಿಸಲಾಗುವುದು.

    ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಕಂದಾಯ ಇಲಾಖೆಯ ಖಾತೆ ಸಮಸ್ಯೆ, ನಮ್ಮ ಇಲಾಖೆ ಹಾಗೂ ಸರ್ಕಾರದ ಐದು ಗ್ಯಾರಂಟಿ ಸೇರಿದಂತೆ ಜನರ ಸಮಸ್ಯೆಗಳ ವಿಚಾರವಾಗಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ನಾಗರೀಗರು ತಮ್ಮ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
    ಜನರು ಅಹವಾಲು ಹಿಡಿದು ಮಂತ್ರಿ,ಉಪ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗಳ ಬಳಿ ಪ್ರತಿನಿತ್ಯ ಬರುತ್ತಾರೆ. ಇದನ್ನು ಕಡಿಮೆ ಮಾಡಲು ಈ ಕಾರ್ಯಕ್ರಮ ರೂಪಿಸಿದ್ದೇವೆ.ಬೆಂಗಳೂರಿನ ಒಂದು ಸ್ಥಳದಲ್ಲಿ ಈ ಕಾರ್ಯಕ್ರಮ ಆಯೋಜಿಸುವುದು ಬೇಡ ಎಂದು ವಿಧಾನಸಭಾ ಕ್ಷೇತ್ರಗಳನ್ನು ವಿಭಾಗಿಸಿ ಆಯಾ ವಲಯದಲ್ಲಿ ಒಂದೊಂದು ದಿನ ಮೀಸಲಿಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ನಿಗದಿ ಮಾಡಲಾಗಿದ್ದು, ಅದರ ಮಾಹಿತಿಯನ್ನು ಜಾಹೀರಾತುಗಳ ಮೂಲಕ ಪ್ರಕಟಿಸಲಾಗುವುದು. ಅಹವಾಲು ನೀಡಲು ಬರುವ ಜನರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ವಿವರಿಸಿದರು.

    ಅಹವಾಲು ನೀಡಲು ಬರುವವರ ಹೆಸರು ನೋಂದಣಿ ಮಾಡುತ್ತೇವೆ. ನಂತರ ಅವರ ಅಹವಾಲುಗಳನ್ನು ಸ್ವೀಕರಿಸುತ್ತೇವೆ. ಜನರ ಸಮಸ್ಯೆಗೆ ಪರಿಹಾರ ನೀಡಲು ನೂರಾರು ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರುತ್ತಾರೆ. ಜನರು ಯಾವುದೇ ದೂರು, ಅಹವಾಲು ಇದ್ದರೂ ಅದನ್ನು ನಮ್ಮ ಬಳಿಗೆ ತರಬಹುದು. ಕಾನೂನು ಚೌಕಟ್ಟಿನಲ್ಲಿ ಅವರಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗುವುದು. ನಿಯಮ ಉಲ್ಲಂಘನೆ ದೂರುಗಳಿದ್ದರೆ ಅವುಗಳನ್ನು ಪರಿಹರಿಸಲು ಬೇರೆ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    Government Karnataka News Politics ಕಾನೂನು ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    Next Article ಈ ರಸ್ತೆಯ Bar ಗೂ‌ಜನ ಬರುತ್ತಿಲ್ಲ | Chitradurga
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • mamak24_zaPa ರಲ್ಲಿ ಭಾರತ ಮೂಲದ Neal Mohan – YouTube ನ ಹೊಸ CEO!
    • betterthanthemovieCow ರಲ್ಲಿ ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.