Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees
    Trending

    ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees

    vartha chakraBy vartha chakraಮಾರ್ಚ್ 16, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.16- ರಾಜ್ಯ ಸರ್ಕಾರಿ ನೌಕರರ ಸಂಬಳ ಸುಮಾರು ಶೇ.27.5ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದಕ್ಕಾಗಿ ವಾರ್ಷಿಕ ಸುಮಾರು 13 ಸಾವಿರ ಕೋಟಿ ರೂಪಾಯಿ ವೆಚ್ಚವಾಗುವ ಅಂದಾಜಿದ್ದು,ಪ್ರಸಕ್ತ ಬಜೆಟ್ ನಲ್ಲಿ ಈ ಮೊತ್ತ ಕಾಯ್ದಿರಿಸಲಾಗಿದೆ.
    ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ 7ನೇ ರಾಜ್ಯ ವೇತನ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ
    ವರದಿ ಸಲ್ಲಿಸಿದರು.

    ಈ ಆಯೋಗ ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು ಮಾಡಿದೆ.ಈ ಮೂಲಕ ನೌಕರರ ಮೂಲವೇತನವನ್ನು 17,000 ರೂಪಾಯಿ ಗಳಿಂದ 27,000 ರೂಪಾಯಿಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ
    ವರದಿ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 7ನೇ ವೇತನ ಆಯೊಗದ ವರದಿಯಲ್ಲಿ ಹಲವಾರು ಶಿಫಾರಸ್ಸುಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರ ವೇತನವನ್ನು ಶೇ.27.5ರಷ್ಟು ಹೆಚ್ಚಿಸಬೇಕು ಎಂಬುದು ಸೇರಿದೆ. ಆಯೋಗದ ಶಿಫಾರಸ್ಸನ್ನು ಆರ್ಥಿಕ ಇಲಾಖೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡಲಿದೆ. ಆ ಬಳಿಕ ವರದಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.

    ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಮಾತನಾಡಿ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ‌ ಎಂದು ಹೇಳಿದರು
    ಈಗಾಗಲೇ ಜಾರಿಯಲ್ಲಿರುವ ಶೇ.17ರಷ್ಟು ವೇತನ ಪರಿಷ್ಕರಣೆ ಅಂತಿಮ ವರದಿ ಜಾರಿಯಾದ ಬಳಿಕ ಸ್ಥಗಿತಗೊಳ್ಳಲಿದೆ. ಒಟ್ಟಾರೆ. 27.5ರ ಒಳಗಿನ ಪ್ರಮಾಣದಲ್ಲಿ ಸರ್ಕಾರ ವೇತನ ಪರಿಷ್ಕರಣೆ ಮಾಡಬಹುದು ಎಂದು ತಿಳಿಸಿದರು.
    ನೌಕರರಿಗೆ ಈಗಾಗಲೇ ಶೇ.31ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ. 2017-18ರಲ್ಲಿ ಮೂಲ ವೇತನ 17 ಸಾವಿರ ರೂ.ಗಳಷ್ಟಾಗಿದ್ದು, ಈ ಎಲ್ಲ ಆರ್ಥಿಕ ಅನುಕೂಲಗಳನ್ನು ಒಳಗೊಂಡು 27 ಸಾವಿರ ರೂಪಾಯಿಗಳಿಗೆ ಹೆಚ್ಚಾಗಬಹುದು ಎಂದು ವಿವರಿಸಿದರು.
    ಶೇ.27.5ರಷ್ಟು ವೇತನ ಪರಿಷ್ಕರಣೆಯನ್ನು 2022ರ ಜುಲೈ 1ರಿಂದ ಪೂರ್ವಾನ್ವಯಗೊಳಿಸುವಂತೆ ಅಂತಿಮ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.ಆಯೋಗದ ಶಿಫಾರಸ್ಸನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತಂದರೆ 2024-25ನೇ ಸಾಲಿಗೆ 17,447 ಕೋಟಿ ರೂ.ಗಳ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದರು.

    ಎಚ್‍ಆರ್‍ಎ ಸೇರಿದಂತೆ ಇತರೆ ಆರ್ಥಿಕ ಸೌಲಭ್ಯಗಳನ್ನು ಹೆಚ್ಚಿಸಲು ಸಲಹೆ ನೀಡಲಾಗಿದೆ. ಜೊತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರದ ಮಾದರಿಯಂತೆ ಪ್ರತಿ 5 ವರ್ಷಕ್ಕೊಮ್ಮೆ ವೇತನ ಆಯೋಗ ರಚಿಸಿ ವೇತನ ಹೆಚ್ಚಳ ಮಾಡುವಂತೆ ‌ಶಿಫಾರಸು‌ ಮಾಡಲಾಗಿದೆ ಎಂದು ಹೇಳಿದರು.
    ಕೇಂದ್ರದ ಮಾರ್ಗಸೂಚಿಗಳನ್ನೇ ಪಾಲನೆ ಮಾಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ತಾರತಮ್ಯ ತಗ್ಗಲಿದೆ. ಕೇಂದ್ರ ಸರ್ಕಾರಿ ವೇತನ ಆಯೋಗಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರದ ಆಯೋಗಗಳು ಅಸ್ತಿತ್ವಕ್ಕೆ ಬರಲಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    Employees govt Govt Employees m ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    Next Article ಗಿನ್ನಿಸ್ ದಾಖಲೆ ಸೇರಿದ MTR ದೋಸೆ
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Rmjxbx on ಫೆಬ್ರವರಿ 12, 2026 2:56 ಫೂರ್ವಾಹ್ನ

      betmgm WI betmgm-play bet 10 get 200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Eifmuu ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Tracymix ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.