Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    Trending

    Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ

    vartha chakraBy vartha chakraಮಾರ್ಚ್ 7, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.7- ನಾಗರಿಕ ಸಮಾಜಕ್ಕೆ ಶಾಪವಾಗಿ ಕಾಡುತ್ತಿರುವ ಆ್ಯಸಿಡ್ (Acid) ದಾಳಿ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇದೀಗ ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸುವ ಕುರಿತಂತೆ ಚಿಂತನೆ ನಡೆಸಿದೆ.
    ಚಿನ್ನಾಭರಣ ತಯಾರಿಕೆ ಸೇರಿದಂತೆ ಕೆಲವೊಂದು ನಿರ್ದಿಷ್ಟ ಉದ್ದೇಶ ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಆ್ಯಸಿಡ್ ಬಳಸದಂತೆ ನಿಷೇಧ ವಿಧಿಸಲು ಸರ್ಕಾರ ನಿಯಮಾವಳಿಗಳಲ್ಲಿ ಮಾರ್ಪಾಡು ಮಾಡಲು ತೀರ್ಮಾನಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವ ಆ್ಯಸಿಡ್‌ ಸುಲಭವಾಗಿ ದೊರೆಯುವುದರಿಂದ  ಇದು ದುರ್ಬಳಕೆಯಾಗುತ್ತಿದೆ. ದುಷ್ಕರ್ಮಿಗಳ ಕೈಗೆ ಇದೊಂದು ಪ್ರಬಲ ಅಸ್ತ್ರವಾಗಿ ಸಿಗತೊಡಗಿದೆ ಹೀಗಾಗಿ ಇದರ ಮಾರಾಟ ಮತ್ತು ಸಾಗಾಣಿಕೆ ಮೇಲೆ ನಿರ್ಬಂಧ ವಿಧಿಸುವ ನಿಯಮ ರೂಪಿಸುವ ಕುರಿತಂತೆ ಚರ್ಚೆಗಳು ನಡೆದಿವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
    ಕೈಗಾರಿಕೆ ಉದ್ದೇಶ ಹೊರತುಪಡಿಸಿ ಆಕ್ಸಿಡನ್ನು ದುರ್ಬಳಕೆ ಮಾಡುವ ಪ್ರಸಂಗಗಳೇ ಹೆಚ್ಚಾಗಿವೆ, ದುಷ್ಕರ್ಮಿಗಳು ಇದನ್ನು ಬಳಸುತ್ತಿರುವುದರಿಂದ
    ಅದರ ಲಭ್ಯತೆ ಮತ್ತು ಖರೀದಿಯ ಸಂಬಂಧ ನಿರ್ಬಂಧಗಳನ್ನು ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
    ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡ ಅವರು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿದರು.

    ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
    ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.
    ಕಡಬದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ಸರ್ಕಾರ ಈಗಾಗಲೇ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಅವರಿಗೆ ಪ್ಲಾಸ್ಟಿಕ್‌ ಸರ್ಜರಿ ಅವಶ್ಯವಿದ್ದರೆ 20 ಲಕ್ಷದವರೆಗೂ ಖರ್ಚನ್ನು ಭರಿಸಲು ಮುಂದಾಗಿದೆ. ಜೊತೆಗೆ ಸಂತ್ರಸ್ತರಿಗೆ ನಿವೇಶನವನ್ನು ಕೂಡಾ ನೀಡಲಾಗುವುದು ಎಂದು ತಿಳಿಸಿದರು.

    ಮಹಿಳೆಯರಿಗೆ ಗೌರವ:
    ಪೊಲೀಸರು ಕೂಡಾ ಮಹಿಳೆಯರ ಸಮಸ್ಯೆ ಗಳ ವಿಚಾರದಲ್ಲಿ ಹೆಚ್ಚು ಕಾಳಜಿಯಿಂದ ಕ್ರಮ ವಹಿಸಬೇಕು,ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಿ ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು ಎಂದರು.
    ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ.ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ನಗರದಲ್ಲಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ ಎಂದು ಹೇಳಿದರು.

    ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಪ್ರಮಾಣ ಹೆಚ್ಚಬೇಕು,ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ.8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬ ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ಜಿ. ಪರಮೇಶ್ವರ್‌ ತಿಳಿಸಿದರು.
    ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು ಎಂದರು.

    ಕಾನೂನು ಚಿನ್ನ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    Next Article ಇನ್ನು ಮುಂದೆ ವಿಧಾನಸೌಧ ಪ್ರವೇಶ ಕಷ್ಟ | Vidhana Soudha
    vartha chakra
    • Website

    Related Posts

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    3 ಪ್ರತಿಕ್ರಿಯೆಗಳು

    1. 56yha on ಜೂನ್ 5, 2025 5:40 ಫೂರ್ವಾಹ್ನ

      cost generic clomiphene without insurance how to get generic clomid pill where can i get clomid how to buy generic clomid tablets how to buy cheap clomid pill clomid medication cost of clomiphene

      Reply
    2. purchase discount cialis online on ಜೂನ್ 9, 2025 1:55 ಫೂರ್ವಾಹ್ನ

      More posts like this would persuade the online time more useful.

      Reply
    3. do flagyl treat stds on ಜೂನ್ 10, 2025 7:52 ಅಪರಾಹ್ನ

      This website really has all of the tidings and facts I needed adjacent to this thesis and didn’t positive who to ask.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertPat ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • RobertBag ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • how can i get cheap minocycline pills ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe