ರಾಜ್ಯ ಸರ್ಕಾರವು ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನವನ್ನು 7 ಸಾವಿರ ರೂ.ನಿಂದ 12 ಸಾವಿರ ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕೆಲಸದ ಅವಧಿಯನ್ನು 6 ಗಂಟೆಯವರೆಗೆ ನಿಗಧಿಪಡಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿದ ಗಂಟೆಗಳು ಮತ್ತು ವಿಭಜಿತ ಸಮಯವನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು 7 ಸಾವಿರ ರೂ.ಗಳಿಂದ 12 ಸಾವಿರ ರೂ.ಗಳಿಗೆ ಹೆಚ್ಚಿಸಲು ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ ಬಯೋಮೆಟ್ರಿಕ್ ಹಾಜರಾತಿ ಆಧಾರದ ಮೇಲೆ ಗೌರವಧನ ಪಾವತಿಸಲು ಮತ್ತು ಹೆಚ್ಚುವರಿ ಗೌರವಧನ ಪಾವತಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಹೆಸರು ಮರು ನಮೀಕರಿಸಲಾಗಿದೆ.
ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವ ಹೆಚ್ಚಳ; ಸರ್ಕಾರ ಆದೇಶ
Previous Articleಪುನೀತ್ ನೆನೆದು ಕಣ್ಣೀರಿಟ್ಟ ರಾಘವೇಂದ್ರ ರಾಜ್‌ಕುಮಾರ್ ಪತ್ನಿ
Next Article ಟಿಕಾಯತ್ಗೆ ಮಸಿ ಬಳಿದ ಮಹಿಳೆ ಬಂಧನ