Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»Trending»ಗೃಹ ಲಕ್ಷ್ಮಿಗೆ ಅದ್ದೂರಿ ಚಾಲನೆ ನೀಡಿದ ಬಿಜೆಪಿ ಶಾಸಕ | Gruha Lakshmi
    Trending

    ಗೃಹ ಲಕ್ಷ್ಮಿಗೆ ಅದ್ದೂರಿ ಚಾಲನೆ ನೀಡಿದ ಬಿಜೆಪಿ ಶಾಸಕ | Gruha Lakshmi

    vartha chakraBy vartha chakraಆಗಷ್ಟ್ 30, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಆ.30 – ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನೂರು ದಿನ‌ ತುಂಬಿದ ‌ಸಂಭ್ರಮದಲ್ಲಿ‌ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ‌(Gruha Lakshmi) ಯೋಜನೆಗೆ ಅದ್ದೂರಿ ಚಾಲನೆ ನೀಡಲಾಗಿದೆ.
    ಈ ಕಾರ್ಯಕ್ರಮವನ್ನು ಹರ್ಷೋದ್ಗಾರಗಳ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬಿಜೆಪಿ ನಾಯಕರು ಈ ಕಾರ್ಯಕ್ರಮವನ್ನು ಒಂದು ಗಿಮಿಕ್ ಎಂದು ಟೀಕಿಸಿ‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇದರ ನಡುವೆ,ಬಿಜೆಪಿಯ ಶಾಸಕ ಹಾಗೂ ಮಾಜಿ ಮಂತ್ರಿ ಎಸ್.ಟಿ.ಸೋಮಶೇಖರ್ ತಮ್ಮ ನಾಯಕತ್ವಕ್ಕೆ ಸೆಡ್ಡು ಹೊಡೆದು ರಾಜ್ಯ ಸರ್ಕಾರದ ಕಾರ್ಯಕ್ರಮಕ್ಕೆ ಅದ್ದೂರಿ ಸ್ವಾಗತ ಕೋರಿದ್ದಾರೆ.
    ಅತ್ತ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಅದ್ದೂರಿ ಸಮಾರಂಭ ನಡೆಯುತ್ತಿದ್ದರೆ,ಇತ್ತ ಸೋಮಶೇಖರ್ ಪ್ರತಿನಿಧಿಸುವ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಯಿತು.
    ಮೈಸೂರಿನ ಕಾರ್ಯಕ್ರಮಗಳ ವೀಕ್ಷಣೆಗೆ ಎಲ್‌ಇಡಿ ಪರದಗಳನ್ನ ಅಳವಡಿಸಲಾಗಿತ್ತು. ಈ ಮೂಲಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ, ಪಂಚ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಭರ್ಜರಿಯಾಗಿ ಜಾರಿಗೊಳಿಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

    ಈ ವೇಳೆ ಮಾತನಾಡಿದ ಎಸ್.ಟಿ.ಸೋಮಶೇಖರ್ ಗೃಹಲಕ್ಷ್ಮೀ ಯೋಜನೆ ಜಾರಿಗೆ ನನ್ನದು ಕೂಡಾ ಒಂದು ಅಳಿಲು ಸೇವೆ ಇದೆ. ನನ್ನ ಕ್ಷೇತ್ರದಲ್ಲೂ ಯೋಜನೆ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
    ಇದು ಅರೆಬೆಂದ ಯೋಜನೆ ಎಂದು ಬಸವರಾಜ ಬೊಮ್ಮಾಯಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಬೊಮ್ಮಾಯಿ ದೊಡ್ಡವರು. ಏನುಬೇಕಾದರೂ ಮಾತಾಡಲಿ. ಇದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮ. ಇದು ಸರ್ಕಾರದ ಯೋಜನೆ, ಮಹಿಳೆಯರಿಗೆ 2 ಸಾವಿರ ರೂ. ಸಿಗುತ್ತದೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ನ್ಯೂನತೆ ನನಗೆ ಕಾಣುತ್ತಿಲ್ಲ. ಸರ್ಕಾರದ ಯೋಜನೆ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡಿದ್ದೇನೆ. ಯೋಜನೆ ಜನರಿಗೆ ತಲುಪಿಸಲು ಏನು ಬೇಕೋ ಅದನ್ನು ಮಾಡಿರುವೆ ಎಂದು ಸಮರ್ಥಿಸಿದರು.
    ಈ ಮೂಲಕ ಕಳೆದೊಂದು ತಿಂಗಳನಿಂದ ಸೋಮಶೇಖರ್ ಬಿಜೆಪಿ ತೊರೆದು‌ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೇಳಿಬರುತ್ತಿರುವ ಸುದ್ದಿಗಳಿಗೆ ನಾನು ಬಿಜೆಪಿ ಬಿಡುವುದಿಲ್ಲ ಎನ್ನುತ್ತಿರುವ ಸೋಮಶೇಖರ್ ಈಗ ನಡೆದುಕೊಂಡಿರುವ ವೈಖರಿ ಅಚ್ಚರಿ ಮೂಡಿಸುತ್ತದೆ.

    gruha jyoti Gruha Lakshmi Karnataka m mi welfare schemes ಇಡಿ ಕಾಂಗ್ರೆಸ್ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email
    Previous Articleಕುಮಾರಸ್ವಾಮಿ ಗೆ ಐಸಿಯು ನಲ್ಲಿ ಚಿಕಿತ್ಸೆ | HD Kumaraswamy
    Next Article ಗನ್ ಮ್ಯಾನ್ ಹುಚ್ಚಾಟ-ಪಿಸ್ತೂಲ್ ನಿಂದ ಹಾರಿದ ಗುಂಡು | Chandrababu Naidu
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe