ಗುಜರಾತ್ ಕಾಂಗ್ರೆಸ್‍ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಾಟಿದಾರ್ ಮೀಸಲಾತಿ ಹೋರಾಟ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜೂನ್ 2ರಂದು ತಾವು ಅಧಿಕೃತವಾಗಿ ಬಿಜೆಪಿ ಸೇರುತ್ತಿರುವುದಾಗಿ ತಿಳಿಸಿದ್ದಾರೆ.
ಪಾಟಿದಾರ್ ಸಮುದಾಯದ ಮೀಸಲಾತಿ ಹೋರಾಟದ ಮೂಲಕ ಪ್ರವರ್ಧಮಾನಕ್ಕೆ ಬಂದ ಹಾರ್ದಿಕ್ ಪಟೇಲ್ ನಂತರದ ದಿನಗಳಲ್ಲಿಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪಕ್ಷದಲ್ಲಿ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ಅದರಲ್ಲಿ ಕೆಲಸ ಮಾಡಲು ತಮಗೆ ಜವಾಬ್ದಾರಿ ನೀಡಿಲ್ಲ ಎಂದು ಆಕ್ಷೇಪಿಸಿ ಮೇ 19ರಂದು ಹಾರ್ದಿಕ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಆ ವೇಳೆ ಮುಂದಿನ ರಾಜಕೀಯ ನಡೆಯದ ಬಗ್ಗೆ ಯಾವುದೇ ಸುಳಿವು ನೀಡದೆ ತಟಸ್ಥವಾಗಿರುವುದಾಗಿ ಹೇಳಿದ್ದರು ಆದರೆ ಇದೀಗ ಏಕಾಏಕಿ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ ಈ ಮೂಲಕ ವರ್ಷಾಂತ್ಯದ ವೇಳೆಗೆ ಚುನಾವಣೆ ನಡೆಯಲಿರುವ ಗುಜರಾತ್ ನಲ್ಲಿ ವಿದ್ಯಮಾನಗಳು ಕುತೂಹಲ ಮೂಡಿಸಿವೆ.