ಹರೇಕಳ ಅಣೆಕಟ್ಟು – ಸೇತುವೆಯಿಂದಾಗಿ ಮುಳುಗಡೆ ಭೀತಿ ಎದುರಿಸುತ್ತಿರುವ ಪಾವೂರು ಗ್ರಾಮದ ಉಳಿಯ ದ್ವೀಪಕ್ಕೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.
ಉಳಿಯ ಪ್ರದೇಶದ ಇನ್ಫ್ಯಾಂಟ್ ಜೀಸಸ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಚರ್ಚ್ ಮುಖ್ಯ ಗುರುಗಳು ಹಾಗು ಸ್ಥಳೀಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಣೆಕಟ್ಟುವಿನಿಂದಾಗಿ ದ್ವೀಪಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಲ್ಲಿ ಸ್ಥಳದಲ್ಲಿಯೇ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು, ಅಲ್ಲದೇ ಉಳಿಯ ಪ್ರದೇಶದ ಜನರ ಓಡಾಟದ ಅನುಕೂಲಕ್ಕಾಗಿ ಪಾದಚಾರಿ ಸೇತುವೆ ನಿರ್ಮಾಣದ ಕುರಿತು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಖಾದರ್ ಸೂಚನೆ ನೀಡಿದರು.
ಈ ಬಗ್ಗೆ ಅತೀ ಶೀಘ್ರದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ತಂಡ ಕೂಡಾ ಉಳಿಯ ಪ್ರದೇಶಕ್ಕೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಮೊಹಮ್ಮದ್ ಮೋನು, ಪಾವೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಪಾವೂರು ಗ್ರಾಮ ಪಂಚಾಯತ್ ಸದಸ್ಯರಾದ ರಿಯಾಝ್ ಗಾಡಿಗದ್ದೆ ಹಾಗು ಶ್ರೀಮತಿ ರವಿಕಲಾ, ಹರೇಕಳ ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಬದ್ರದ್ದೀನ್,ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಮಜೀದ್, ಸತ್ತಾರ್, ಕಾಂಗ್ರೆಸ್ ಮುಖಂಡರಾದ ಮುಸ್ತಫಾ ಹರೇಕಳ, ಝಕರಿಯ ಮಲಾರ್, ಪಾವೂರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೆ.ಎಮ್, ಪಾವೂರು ಯುವ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ಮಲಾರ್, ಉಪಾಧ್ಯಕ್ಷ ಸಲೀಮ್, ಕ್ಯಾನೆಟ್ ಡಿಸಿಲ್ವ, ಗಿಲ್ಬರ್ಟ್ ಮುಂತಾದವರು ಉಪಸ್ಥಿತರಿದ್ದರು.