ಬೆಂಗಳೂರು,ಏ.24: ಹೋಟೆಲ್ ನ ಪಾರ್ಕಿಂಗ್ ಪ್ರದೇಶದಲ್ಲಿ ಕಾರು ತೆಗೆಯುವ ವಿಷಯಕ್ಕೆ ಸ್ಥಳೀಯರೊಂದಿಗೆ ಜಗಳ ಮಾಡಿಕೊಂಡ ಸ್ಯಾಂಡಲ್ ವುಡ್ ನ ಯುವ ದಂಪತಿ ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಕೋರಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಈ ಕುರಿತು ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನನಗೆ ನ್ಯಾಯ ಕೊಡಿಸಬೇಕು’ ಎಂದು ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಸಚಿವರಲ್ಲಿ ವಿನಂತಿಸಿದ್ದಾರೆ.
ಹುಬ್ಬಳ್ಳಿಗೆ ತೆರಳಿ ಪ್ರಹ್ಲಾದ ಜೋಶಿ ಅವರನ್ನು ಭೇಟಿ ಮಾಡಿದ ಈ ಇಬ್ಬರು ತಮ್ಮ ಮೇಲಾದ ದೌರ್ಜನ್ಯದ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದರೂ ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ
‘ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ. ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ’ ಎಂದು ಸಚಿವರೆದುರು ಹೇಳಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಹರ್ಷಿಕಾ ಪೂಣಚ್ಚ, ‘ನಾವು ಹೋಟೆಲ್‌ಗೆ ಹೋದ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಕನ್ನಡ ಮಾತಾಡಿದ್ದಕ್ಕೆ ಜಗಳ ಮಾಡಿದ್ದಾರೆ. ದೌರ್ಜನ್ಯ ಎಸಗಿ ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದರು. ಜನಪ್ರಿಯ ವ್ಯಸ್ಥಿತಿಯೇನು’ ಎಂದು ಪ್ರಶ್ನಿಸಿದರು.
‘ನೇಹಾ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಬಂದಿದ್ದೇವೆ. ನಾವು ಯಾರ ತಂಟೆಗೂ ಹೋಗದೆ, ನಮ್ಮ ಪಾಡಿಗೆ ನಾವಿದ್ದೇವೆ. ದೌರ್ಜನ್ಯ ಎಸಗಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸಚಿವ ಜೋಶಿ ಅವರಲ್ಲಿ ಒತ್ತಾಯಿಸಿದ್ದೇನೆ. ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ’ ಎಂದು ಹರ್ಷಿಕಾ ಹೇಳಿದರು.
8 ಪ್ರತಿಕ್ರಿಯೆಗಳು
cost cheap clomiphene without a prescription clomid without rx buying cheap clomid without prescription can i buy cheap clomiphene pill how to get clomiphene tablets order generic clomid without rx cost clomiphene pills
The sagacity in this serving is exceptional.
order zithromax 250mg online – order azithromycin 500mg online nebivolol 5mg canada
buy amoxiclav pills – atbioinfo buy ampicillin pills
buy esomeprazole online cheap – https://anexamate.com/ buy esomeprazole 40mg capsules
buy coumadin pill – https://coumamide.com/ hyzaar where to buy
order meloxicam 7.5mg sale – relieve pain order mobic online cheap
top ed pills – fastedtotake.com ed pills online