ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ತುಸು ಕಡಿಮೆಯಾಗಿದೆ.
ಅತೀ ಹೆಚ್ಚು ಮಳೆ ಸುರಿದ ಕರಾವಳಿ ಜಿಲ್ಲೆಗಳಲ್ಲಿ ಜನಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇದೇ ವೇಳೆ ಬೀದರ್ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆ ಬಿರುಸು ಪಡೆದುಕೊಂಡಿದೆ.
ಬೀದರ್‌ನಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಕಳೆದ ಮೂರು ದಿನಗಳಿಂದ ಬೀದರ್‌ನಲ್ಲಿ ಭಾರೀ ಮಳೆಯಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನದ ಮೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ.