ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ 10 ದಿನಗಳು ಕಳೆದಿದೆ. ಕರಾವಳಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಯಾದಗಿರಿ, ಗದಗ, ಕೊಪ್ಪಳ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಚದುರಿದ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.