ಇಟಲಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಟಲಿಯ ಹೆಲಿಕಾಪ್ಟರ್ ಪತನಗೊಂಡಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಇದೀಗ ಎಲ್ಲ 7 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಸ್ಕನಿಯ ಲುಕ್ಕಾದಿಂದ ಟೇಕ್ ಆಫ್ ಆಗಿದ್ದ ಹೆಲಿಕಾಪ್ಟರ್ ಟ್ರೆವಿಸೊ ನಗರದ ಕಡೆಗೆ ಹೋಗುತ್ತಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನವಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್‌ಗೆ ಸಂಪೂರ್ಣ ಬೆಂಕಿ ಹೊತ್ತಿಕೊಂಡ ಕಾರಣ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
Previous Articleಸೋನಿಯಾಗಾಂಧಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article ಡ್ರಗ್ ಪ್ರಕರಣ: ಶ್ರದ್ಧಾ ಕಪೂರ್ ಸೋದರ ಅರೆಸ್ಟ್!