ಮೈಸೂರು – ರಾಜ್ಯದ ಉಡುಪಿಯಲ್ಲಿ ಆರಂಭಗೊಂಡು, ದೇಶಾದ್ಯಂತ ವಿವಾದ ಸೃಷ್ಟಿಸಿದ್ದಲ್ಲದೇ ಕೋರ್ಟ್ ಮೆಟ್ಟಿಲೇರಿದ್ದ ಹಿಜಾಬ್ ನಿಷೇಧ (Hijab Ban) ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲೆ ಮತ್ತು ಹೈಸ್ಕೂಲ್ ಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.ಸರ್ಕಾರ ಅಥವಾ ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರ ಹೊರತು ಪಡಿಸಿ ಬೇರೆ ಯಾವುದೇ ರೀತಿಯ ವಸ್ತ್ರ ಧರಿಸುವಂತಿಲ್ಲ ಎಂದು ತಿಳಿಸಿತ್ತು. ಅದರಲ್ಲೂ ಹಿಜಾಬ್ ಧರಿಸಲು ಅವಕಾಶವೇ ಇಲ್ಲ ಎಂದು ಈ ಆದೇಶದಲ್ಲಿ ತಿಳಿಸಲಾಗಿತ್ತು.
ಅಂದಿನ ಸರ್ಕಾರದ ಈ ಆದೇಶ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿತ್ತು. ಸರ್ಕಾರದ ಆದೇಶ ವಿರೋಧಿಸಿ ಮುಸ್ಲಿಂ ಸಮುದಾಯದ ಹಲವು ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆ ಬಿಡಿಸಿದರೆ,ಕೆಲವರು ಆದೇಶ ಪ್ರಶ್ನಿಸಿ ಕೋರ್ಟ್ ಮೊರೆ ಹೊಕ್ಕಿದ್ದರು.
ಇಂತಹ ವಿವಾದ ಇನ್ನೂ ಹಸಿರಾಗಿರುವಾಗಲೇ ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಆದೇಶ ವಾಪಸ್ ಪಡೆಯುವುದಾಗಿ ಪ್ರಕಟಿಸಿದೆ.
ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದು ಮನವಿ ಮಾಡಿದ ಅವರು,ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ.ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು.
ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು.ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದು ಸೂಚಿಸಿದರು.
5 ಪ್ರತಿಕ್ರಿಯೆಗಳು
индийский пасьянс гадание онлайн индийский пасьянс гадание онлайн .
вывод из запоя недорого вывод из запоя недорого .
Паркетная доска – это паркет из натурального дерева, который используется для отделки пола. Он покрыт износоустойчивым лаком или масло-воском с различными видами обработки (браш, волна, фаска), что делает его популярным выбором для создания уютной атмосферы в доме. Паркетная доска может быть различных видов, от классического дуба до экзотических пород дерева. Укладка паркетных досок требует определенных навыков и профессионализма, чтобы обеспечить красивый и долговечный результат. https://kvarcvinil3.ru/
проститутки центр москвы проститутки центр москвы .
проститутки москвы новые проститутки москвы новые .