Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !
    Viral

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    vartha chakraBy vartha chakraಮೇ 30, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 30:
    ರಾಜಧಾನಿ ಮಹಾನಗರ ಬೆಂಗಳೂರಿನ ಹೃದಯ ಭಾಗದಲ್ಲಿರುವ ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಇದೀಗ ಹಠಾತ್ ತಿರುವ ಬಂದಿದೆ
    ಅರಣ್ಯಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.
    ಸುದ್ದಿಗಾರರಿಗೆ ಈ ಮಾಹಿತಿ ನೀಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ‌ ಎಂದು ಹೇಳಿದರು
    ಇಂತಹ ಸ್ಪಷ್ಟ ನಿಯಮಾವಳಿಗಳು ಇದ್ದರೂ ಕೂಡ ಈ ಭೂಮಿ ಪರಭಾರೆ ಆಗಿದೆ, ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು.
    ಎಚ್.ಎಂ.ಟಿ. ವಶದಲ್ಲಿರುವ ಅರಣ್ಯಭೂಮಿ 7 ಕೋಟಿ ಕನ್ನಡಿಗರ ಆಸ್ತಿ, ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಪೂರ್ವಾನುಮತಿಯಿಲ್ಲದೆ ಅಧಿಕಾರಿಗಳು ಡಿನೋಟಿಫಿಕೇಷನ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ 4 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮಕ್ಕೆ ತಾವು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿರುವುದಾಗಿ ತಿಳಿಸಿದರು.
    ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆರ್. ಗೋಕುಲ್ ತಾವು ಬೇಲಿಕೇರಿ ಪ್ರಕರಣದಲ್ಲಿ ಆಡಳಿತ ಪಕ್ಷದ ಶಾಸಕರಿಗೆ ಶಿಕ್ಷೆ ಆಗುವಂತೆ ಮಾಡಿದ ಕಾರಣ ತಮ್ಮನ್ನು ಬಲಿ ಪಶು ಮಾಡಲಾಗುತ್ತಿದೆ ಎಂದು ತಿಳಿಸಿ, ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಇದು ಸರ್ಕಾರದ ವಿರುದ್ಧ ಮಾಡಿರುವ ಸಂಪೂರ್ಣ ಸುಳ್ಳು ಆರೋಪ ಎಂದರು.
    2024ರ ಸೆಪ್ಟೆಂಬರ್ 24ರಂದು ತಾವು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳಿಸಿ, ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ಸೂಚನೆ ನೀಡಿದ ಒಂದು ತಿಂಗಳ ನಂತರ ಅಕ್ಟೋಬರ್ 2024ರಲ್ಲಿ ಬೇಲಿಕೇರಿ ತೀರ್ಪು ಬಂದಿದೆ. ಆರ್.ಗೋಕುಲ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿ ಪತ್ರ ಬರೆದಿದ್ದಾರೆ ಇದು ಕೂಡ ಅಧಿಕಾರಿಯ ದುರ್ವರ್ತನೆ ಆಗುತ್ತದೆ ಅಥವಾ ಬೆದರಿಕೆಯ ತಂತ್ರ ಎಂದು ಭಾವಿಸಬಹುದಾಗಿದೆ ಎಂದು ತಿಳಿಸಿದರು
    ಎಚ್.ಎಂ.ಟಿ. ಅರಣ್ಯ ಭೂಮಿ ಪ್ರದೇಶಕ್ಕೆ ತಾವೇ ಖುದ್ದು ಭೇಟಿ ನೀಡಿದ್ದು, ಅಲ್ಲಿ ಇಂದಿಗೂ 280 ಎಕರೆಯಷ್ಟು ನೆಡುತೋಪು ಇದೆ. ಆದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ ಗೆ ಸುಳ್ಳು ಮಾಹಿತಿ ನೀಡಿ ಐಎ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಎಚ್.ಎಂ.ಟಿ. ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಐ.ಎ. ಸಲ್ಲಿಸಲು ಬರುವುದಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಏಕೆ ಪತ್ರ ಬರೆಯಲಿಲ್ಲ ಎಂದು ಪ್ರಶ್ನಿಸಿದರು.
    ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯಭೂಮಿ ಕುರಿತಂತೆ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಗಮನಕ್ಕೆ ಸಹ ತಾರದೆ, ಸಚಿವ ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್ ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ.
    ಈಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತಿ ಐ.ಎ.ಎಸ್. ಅಧಿಕಾರಿ ಮತ್ತು ಐ.ಎಫ್.ಎಸ್. ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ತಾವು ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಸಿರುವುದಾಗಿ ಹೇಳಿದರು.
    ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐ.ಎ. ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

    m ಚಲನಚಿತ್ರ ಧಾರಾವಾಹಿ ಬೆಂಗಳೂರು ವಾಣಿಜ್ಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleHoney trap ಪ್ರಕರಣ ಏನಾಯ್ತು ಗೊತ್ತಾ ?
    Next Article ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prignat-avto-863 ರಲ್ಲಿ ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    • 9yu6i ರಲ್ಲಿ ಕುಮಾರಸ್ವಾಮಿ ಶೀಘ್ರದಲ್ಲಿ ಸಿಎಂ ಆಗುತ್ತಾರಂತೆ.
    • kr6rr ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe