ರಾತ್ರಿ ಹನ್ನೊಂದುವರೆ ಸುಮಾರಿಗೆ ಹೋಟೆಲ್ ಗೆ ಬಂದ ಗ್ರಾಹಕರು ಊಟ ಬೇಕು ಬೇಡಿಕೆ ಇಟ್ಟಿದ್ದಾರೆ. ಇಷ್ಟು ಹೊತ್ತಲ್ಲಿ ಊಟ ಸಿಗೋದಿಲ್ಲ ಎಂದು ಹೇಳಿದಕ್ಕೆ ಕೋಪಗೊಂಡ ಅಪರಿಚಿತರು ಹೋಟೆಲ್ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಕೊಪ್ಪಳದ ಗಂಗಾವತಿಯ ಆನೆಗುಂದಿಯಲ್ಲಿ ನಡೆದಿದೆ.
ತಡರಾತ್ರಿಯಾಗಿದ್ದರಿಂದ ಹೋಟೆಲ್ನಲ್ಲಿ ಗ್ರಾಹಕರಿಗೆ ನೀಡಲು ಯಾವುದೇ ಆಹಾರ ಇರಲಿಲ್ಲ. ಹೀಗಾಗಿ ಈ ಹೊತ್ತಲ್ಲಿ ಊಟ ನೀಡಲು ಆಗೋದಿಲ್ಲ ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಯುವಕರು ಹೋಟೆಲ್ ಸಿಬ್ಬಂದಿಗೆ ತಿಳಿಯದಂತೆ ಅಡುಗೆ ಮನೆಯ ಬಾಗಿಲನ್ನು ಲಾಕ್ ಮಾಡಿದ್ದಾರೆ. ಇಷ್ಟು ಸಾಲದು ಎಂಬಂತೆ ಹೋಟೆಲ್ಗೆ ನೀರಿನ ಸಂಪರ್ಕವನ್ನು ಬಂದ್ ಮಾಡಿದ್ದಾರೆ. ಇದಾದ ಬಳಿಕ ಬೆಂಕಿ ಹಚ್ಚಿದ್ದಾರೆ.
ಮಂಗಳೂರು ಹಂಚಿನ ಹೊದಿಕೆಯನ್ನು ಹೊಂದಿದ್ದ ಈ ಹೋಟೆಲ್ಗೆ ಬೆಂಕಿ ತಾಗುತ್ತಿದ್ದಂತೆಯೇ ಧಗ ಧಗ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ನ 11 ಕೋಣೆಗಳು ಸುಟ್ಟು ಭಸ್ಮವಾಗಿವೆ. ಅಡುಗೆ ಕೋಣೆಯಲ್ಲಿದ್ದ ಬಂಧಿಯಾಗಿದ್ದ ಹೋಟೆಲ್ನ ಸಿಬ್ಬಂದಿ ಸ್ಥಳೀಯರಿಗೆ ಕರೆ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಓಡಿ ಬಂದ ಗ್ರಾಮಸ್ಥರು ಅಡುಗೆ ಸಿಬ್ಬಂದಿಯನ್ನು ಕೋಣೆಯಿಂದ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
