ಹೈದರಾಬಾದ್,ಜೂ.4- ಮರ್ಸಿಡಿಸ್ ಬೆನ್ಜ್ ಕಾರಿನಲ್ಲಿ 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರಲ್ಲಿ ಓರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ನಡೆಸಿದ ಐವರು ಕಾಮುಕರಲ್ಲಿ ಮೂವರು ಅಪ್ರಾಪ್ತರಾಗಿದ್ದಾರೆ ಎಂದು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.
ಕಳೆದ ಮೇ 28 ರಂದು ಹೈದರಾಬಾದ್ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹೀನ ಕೃತ್ಯದ ಕುರಿತು ಅಪ್ರಾಪ್ತ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ನಂತರ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 9 ಅನ್ನು ಪೋಕ್ಸೊ ಕಾಯಿದೆಯ 10 ರೊಂದಿಗೆ ಈ ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿಗಳ ಬಗ್ಗೆ ಸಂತ್ರಸ್ತೆ ಏನನ್ನೂ ಬಹಿರಂಗಪಡಿಸಿಲ್ಲ. ಆದರೆ ಆಕೆ ಒಬ್ಬನ ಹೆಸರನ್ನು ಮಾತ್ರ ತಿಳಿಸಿದ್ದಾಳೆ. ತಕ್ಷಣ ಅವನನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿದ್ದು, ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಜೋಯಲ್ ಡೇವಿಸ್ ತಿಳಿಸಿದ್ದಾರೆ.
ಕೃತ್ಯ ನಡೆಸಿದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಐದು ಆರೋಪಿಗಳ ಬಗ್ಗೆ ಪತ್ತೆ ಮಾಡಲಾಗಿದೆ. ಸಂತ್ರಸ್ತೆಯು ಕೃತ್ಯದಿಂದ ಆಘಾತಗೊಂಡಿದ್ದು ಯಾರನ್ನು ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎಂದರು. ಶಂಕಿತ ಆರೋಪಿಗಳು ಪಬ್ನ ಹೊರಗೆ ಅಪ್ರಾಪ್ತೆ ಜೊತೆ ನಿಂತಿರುವುದನ್ನು ಕಾಣಿಸಲಿದೆ. ಈ ವೇಳೆ ಹುಡುಗರು ಸಂತ್ರಸ್ತೆಯನ್ನು ಮನೆಗೆ ಬಿಡಲು ಮುಂದಾಗಿದ್ದಾರೆ. ಸಂತ್ರಸ್ತೆ ಕಾರಿನ ಬಳಿ ಹೋಗುತ್ತಿದಂತೆ ಆಕೆಯ ಮೇಲೆ ಹಲ್ಲೆ ಮಾಡಿ ಕಾರಿನೊಳಗೆ ಎಳೆದುಕೊಂಡು ಆರೋಪಿಗಳು ಸರದಿಯಲ್ಲಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಇತರರು ಕಾರಿನ ಹೊರಗೆ ಕಾವಲು ನಿಂತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
Previous Articleಪಿಎಸ್ಐ ನೇಮಕಾತಿ ಅಕ್ರಮ ಬಂಧಿತರ ಸಂಖ್ಯೆ ಏರಿಕೆ
Next Article ಕೊಲೆಗೆ ಯತ್ನಿಸಿದ ಬಿಜೆಪಿ!