ಬೆಂಗಳೂರು – ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ (DK Shivakumar) ಸೂಚನೆ.
“ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಬಂದಿದೆ. ಕೆಲವೆಡೆ ಸಂಚಾರ ಸಮಸ್ಯೆ ಎದುರಾಗಿದೆ. ಉಳಿದಂತೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನ ಹರಿಸಬೇಕು .
* ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಅಧಿಕಾರಿಗಳು/ ಇಂಜಿನಿಯರ್ ಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.
* ರಾಜಧಾನಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸಬೇಕು. ಅವರ ಸುರಕ್ಷತೆ ಬಗ್ಗೆ ಸಿಬ್ಬಂದಿ ಗಮನ ಹರಿಸಬೇಕು.
* ಸಹಾಯವಾಣಿ ಕೇಂದ್ರದಲ್ಲಿ (Helpline Centre) ಸಂಬಂಧಪಟ್ಟ ಅಧಿಕಾರಿಗಳು ಸದಾ ಜಾಗರೂಕರಾಗಿ ಇರಬೇಕು.
* ಸಾರ್ವಜನಿಕರಿಂದ ಬಂದ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.
* ರಸ್ತೆ ಸಂಚಾರಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು.
* ಪದೇ ಪದೇ ಅನಾಹುತ ಸಂಭವಿಸುವ ಕಡೆ ಹೆಚ್ಚು ಗಮನ ಕೊಡಬೇಕು.
* ಯಾವುದೇ ಪ್ರಾಣಾಪಾಯಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ಷಿಪ್ರ ನೆರವು ಒದಗಿಸಬೇಕು.
* ಕಾಲುವೆಗಳಲ್ಲಿ, ಸರಾಗವಾಗಿ ನೀರು ಹರಿದು ಹೋಗಬೇಕು. ಇದಕ್ಕೆ ಇರುವ ಅಡಚಣೆಗಳನ್ನು ತೆರವುಗೊಳಿಸಬೇಕು.
* ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ, ರಸ್ತೆ ಮತ್ತು ಅಂಡರ್ ಪಾಸ್ ಗಳಲ್ಲಿ ನಿಂತಿರುವ ನೀರನ್ನು ತೆರವುಗೊಳ್ಳಬೇಕು.
* ಪರಿಹಾರ ಕಾರ್ಯಗಳಿಗೆ ಯಾವುದೇ ಹಣಕಾಸಿನ ತೊಂದರೆ ಇರುವುದಿಲ್ಲ.
* ನಾನು ಮತ್ತೆ ಯಾವುದೇ ಸಂದರ್ಭದಲ್ಲಿ ಬೇಕಾದರೂ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.
* ಅಸಡ್ಡೆ, ಬೇಜವಾಬ್ದಾರಿ ತೋರಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು.
6 ಪ್ರತಿಕ್ರಿಯೆಗಳು
Промокоды, которые работают! Не пропустите! Промокоды, которые работают! Не пропустите! .
идеи для маленького бизнеса biznes-idei12.ru .
Снять алкогольную интоксикацию на дому http://fizioterapijakeskic.com .
вип эскорт http://www.drive-models.ru .
watch stories anonymously [url=anonstoriesview.com]watch stories anonymously[/url] .
Официальная покупка диплома вуза с сокращенной программой в Москве