ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಹೊಸ ವಿವಾದ ಸೃಷ್ಟಿಸಿದ್ದಾರೆ. ನೂತನ ರಾಷ್ಟ್ರಪತಿ ದ್ರೌಪಧಿ ಮುರ್ಮು ಅವರನ್ನು ಅಧೀರ್ ರಂಜನ್ ಚೌಧರಿ ರಾಷ್ಟ್ರಪತ್ನಿ ಎಂದು ಕರೆದಿದ್ದಾರೆ.
ಅಧೀರ್ ರಂಜನ್ ಅವರ ಹೇಳಿಕೆಗೆ ಬಿಜೆಪಿ ಸದಸ್ಯರು ಕೆಂಡಾಮಂಡಲರಾಗಿದ್ದಾರೆ. ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು ಅಧೀರ್ ರಂಜನ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ತಮ್ಮ ಹೇಳಿಕೆಗೆ ಈಗಾಗಲೇ ಕ್ಷಮೆ ಯಾಚಿಸಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿಯನ್ನು ರಾಷ್ಟ್ರಪತ್ನಿ ಎಂದ ಅಧೀರ್ ರಂಜನ್ ಚೌಧರಿ
Previous Articleಪ್ರವೀಣ್ ಹತ್ಯೆ ಪ್ರಕರಣ; ಕೇರಳದಲ್ಲಿ ಇಬ್ಬರು ಸೆರೆ-ಒಟ್ಟು 21 ಮಂದಿ ವಶ
Next Article ಬಾಟಲಿಯಿಂದ ಮಾರಣಾಂತಿ ಹಲ್ಲೆ ಜೀವತೆತ್ತ ಯುವಕ