ನವದೆಹಲಿ: ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗುವುದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಈ ಹಿಂದೆ ಅನಾರೋಗ್ಯದ ಕಾರಣ ನೀಡಿದ್ದ ಅವರು ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿದ್ದರು.
ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ರಾಹುಲ್ ಗಾಂಧಿ ಕೂಡ ಇದೇ ರೀತಿ ವಿಚಾರಣೆಗೆ ಗುರಿಯಾಗಿದ್ದರು.
Previous Articleಮಂಕಿಪಾಕ್ಸ್ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ
Next Article ವಿಮಾನ ನಿಲ್ದಾಣದಲ್ಲಿ 45Air Gun ವಶ..!