ಹೈದರಾಬಾದ್,ಆ.13– ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಬಂಧನದ ಭೀತಿಯಿಂದ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಅಗ್ನಿಪಥ್ ಪ್ರತಿಭಟನೆಯಲ್ಲಿ ಮಗ ಭಾಗವಹಿಸಿದ್ದ. ನನ್ನನ್ನು ಪೊಲೀಸರು ಬಂಧಿಸುತ್ತಾರೆ ಮತ್ತು ಓದಿನ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೆದರಿ ಪುತ್ರ ಆತ್ಮಹತ್ಯೆ ಮಾಡಿರುವುದಾಗಿ ಮೃತ ಯುವಕನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಜೂನ್‍ನಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದ್ದು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆಯ ಮೂರು ಸೇವೆಗಳಲ್ಲಿ ಯಾವುದಕ್ಕಾದರೂ ‘ಅಗ್ನಿವೀರ್’ ಆಗಿ ನೇಮಿಸಿಕೊಳ್ಳಲು ನಿರ್ಧರಿಸಿತ್ತು.
ಈ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಬಿಹಾರ, ಉತ್ತರ ಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತ ಯುವಕರು ರೈಲ್ವೆ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದರು ಮತ್ತು ರೈಲುಗಳಿಗೆ ಬೆಂಕಿ ಹಚ್ಚಿದರು.
Previous ArticleHoney Trap ನಲ್ಲಿ ಸ್ಯಾಂಡಲ್ ವುಡ್ ನಟ..
Next Article ಸೊಸೆ ತಲೆ ಕಡಿದು ಠಾಣೆಗೆ ತಂದ ಅತ್ತೆ