ವಾಷಿಂಗ್ಟನ್: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಐಸಿಸ್ ಉಗ್ರರ ಕೆಟ್ಟ ದೃಷ್ಟಿ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಬಿದ್ದಿದೆ.
ಐಸಿಎಸ್ ಹಿಟ್ ಲಿಸ್ಟ್‌ನಲ್ಲಿ ಮೋದಿ ಅವರ ಹೆಸರನ್ನು ಉಗ್ರರು ಸೇರಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.
ಐಸಿಎಸ್ ಮ್ಯಾಗಜಿನ್ ಮುಖಪುಟದಲ್ಲಿ ಕೂಡ ಮೋದಿ ಅವರ ಫೋಟೋ ಪ್ರಕಟಿಸಲಾಗಿದೆ ಎಂದು ವರದಿಯಾಗಿದೆ.
ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಮೋದಿ ಅವರ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಕಳೆದ ಬಾರಿ ಪಂಜಾಬ್‌ಗೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿ ಅವರ ಭದ್ರತಾ ವ್ಯವಸ್ಥೆಯಲ್ಲಿ ಗಂಭೀರ ಲೋಪ ಆಗಿತ್ತು. ಈ ಸಂಬಂಧ ಸಮಗ್ರ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿತ್ತು.