ಪಾಟ್ನಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರೆ ಎಳೆದಿದ್ದಾರೆ. ಪಾಟ್ನಾದಲ್ಲಿ ನಡೆದ ಬಿಜೆಪಿ ವಿವಿದ ವರ್ಗಗಳ ಕಾರ್ಯಾಕಾರಿಣಿ ಸಭೆಯಲ್ಲಿ ಅಮಿತ್ ಶಾ ಇದನ್ನು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿರಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬದಲಾಗಿ ಬಿಜೆಪಿ ಇತರ ನಾಯಕರನ್ನು ಪ್ರಧಾನಿ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಈ ಹಿಂದೆ ವರದಿಯಾಗಿತ್ತು.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರು ಕೂಡ ಕೇಳಿ ಬರುತ್ತಿತ್ತು. ಈ ಮಧ್ಯೆ ಜೆಡಿಯು ಜತೆಗಿನ ರಾಜಕೀಯ ಮೈತ್ರಿ ಮುಂದುವರಿಯಲಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.