ರಾಂಚಿ(ಜಾರ್ಖಂಡ್),ಆ.25-ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಖ್ಯಮಂತ್ರಿ ಹೇಮಂತ್ ಸೊರೆನ್ʼರ ರಾಜಕೀಯ ಸಹಾಯಕ ಪ್ರೇಮ್ ಪ್ರಕಾಶ್ ರನ್ನು ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕಾಶ್ ಅವರನ್ನು ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಂಧಿಸಿ ವಿಚಾರಣೆ ನಡೆಸಲಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ. ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ರಾಜಕೀಯ ಸಹಾಯಕ ಪಂಕಜ್ ಮಿಶ್ರಾ ಮತ್ತು ಅವರ ಸಹವರ್ತಿ ಬಚ್ಚು ಯಾದವ್ ಅವರನ್ನು ಬಂಧಿಸಿತ್ತು.
ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್‌ಸಿಆರ್‌ನ ಇತರ ಕೆಲವು ಸ್ಥಳಗಳನ್ನು ಹೊರತುಪಡಿಸಿ ರಾಂಚಿಯ ಪ್ರೇಮ್ ಪ್ರಕಾಶ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ ಬುಧವಾರ ಶೋಧ ನಡೆಸಿತು. ಅವರ ಮನೆಯೊಂದರಿಂದ ಎರಡು ಎಕೆ -47 ರೈಫಲ್‌ಗಳು ಮತ್ತು 60 ಬುಲೆಟ್‌ಗಳನ್ನು ಇಡಿ ವಶಪಡಿಸಿಕೊಂಡಿದೆ.
ಈ ಶಸ್ತ್ರಾಸ್ತ್ರಗಳು ಇಬ್ಬರು ಜಾರ್ಖಂಡ್ ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ಸೇರಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಇದೀಗ ಅವರಿಬ್ಬರನ್ನೂ ಅಮಾನತುಗೊಳಿಸಲಾಗಿದೆ.
Previous ArticleED ಅಧಿಕಾರಿಗಳ ಹೆಸರಿನಲ್ಲಿ ಲೂಟಿ
Next Article ಉಡುಪಿ ನೀರಾವರಿ ಯೋಜನೆಗೆ ಸಂಪುಟ ಅಸ್ತು