ಕಾರವಾರ,ಅ.26 -ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪರಿಚಯ ಬೆಳೆಸಿದ ಸ್ನೇಹಿತನ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಟ್ಕಳ ತಾಲೂಕಿನ ಭಟ್ಕಳದ ಹಾಡವಳ್ಳಿಯಲ್ಲಿ ನಡೆದಿದೆ.
ಹಾಡವಳ್ಳಿಯ ನೇತ್ರಾ ಗೋವಾಳಿ(24) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತನಾಗಿದ್ದ ಗೋವರ್ಧನ್ ಮೊಗೇರ್ ಎಂಬಾತ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಕಳೆದೊಂದು ವರ್ಷದಿಂದ ನೇತ್ರಾಗೆ ಇನ್‌ಸ್ಟಾಗ್ರಾಮ್‌ನಲ್ಲಿ ಗೋವರ್ಧನ್ ಪರಿಚಯವಾಗಿ ತೀರಾ ಆತ್ಮೀಯನಾಗಿ ಪ್ರೀತಿಸುವಂತೆ ಕಿರುಕುಳ ನೀಡಲು ಆರಂಭಿಸಿದ್ದ. ಪ್ರೀತಿಗೆ ಒಪ್ಪದಿದ್ದಾಗ, ತಾನು ಖರ್ಚು ಮಾಡಿದ್ದ ಹಣ ನೀಡುವಂತೆ ಪೀಡಿಸಲು ಆರಂಭಿಸಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ನಿನ್ನ ಅಶ್ಲೀಲ ಪೋಟೋಗಳನ್ನು ಹರಿಬಿಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದ.
ಈ ಕಿರುಕುಳದಿಂದ ಬೇಸತ್ತ ನೇತ್ರಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಗೋವರ್ಧನ್ ಕಾರಣ ಎಂದು ನೇತ್ರಾ ತಂದೆಯಿಂದ ಗೋವರ್ಧನ್ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


1 ಟಿಪ್ಪಣಿ
Your winning streak wrote its own press release – http://gketorolac.com/starburst-slot-game-best-online-real-money-play-big-wins-2026/ , Where adrenaline signs the cheques .