ಬೆಂಗಳೂರು,ಮೇ.30- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 9.50 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಂದಿರಾನಗರದ ಹೆಚ್ ಎಎಲ್ 2ನೇ ಹಂತದ ಅಂಬೇಡ್ಕರ್ ಕಾಲೇಜಿನ ಪುಟ್ ಪಾತ್ ನ ಬಳಿ ಟಿ ಟ್ವೆಂಟಿ ಕ್ರಿಕೆಟ್ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಂಡು ಜೂಜಾಟ ಆಡುತ್ತಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನಿಂದ 9.50 ಲಕ್ಷ ನಗದು, ಮೊಬೈಲ್, ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ.
ಆರೋಪಿಯು ಮೊಬೈಲ್ ನಲ್ಲಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಆಡಿಸುತ್ತಿದ್ದಾಗ ಪೊಲೀಸರ ಅತಿಥಿಯಾಗಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Previous Articleಕಾಂಗ್ರೆಸ್ Surprise!
Next Article ಕೈ ನೋವೆಂದು ಆಸ್ಪತ್ರೆ ಸೇರಿದ ಯುವತಿ ಶವವಾಗಿ ಮನೆಗೆ!