Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ISRO ವಿಜ್ಞಾನಿಗಳಿಗೆ ವಿಧಾನಸೌಧದಲ್ಲಿ ಸತ್ಕಾರ | S Somanath
    Trending

    ISRO ವಿಜ್ಞಾನಿಗಳಿಗೆ ವಿಧಾನಸೌಧದಲ್ಲಿ ಸತ್ಕಾರ | S Somanath

    vartha chakraBy vartha chakraಆಗಷ್ಟ್ 24, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    ISRO
    Share
    Facebook Twitter LinkedIn Pinterest Email

    ಬೆಂಗಳೂರು, ಆ. 24 – ಯಶಸ್ವಿ ಚಂದ್ರಯಾನದ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಇಸ್ರೋದ ವಿಜ್ಞಾನಿಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಸನ್ಮಾನಿಸುವ ಮೂಲಕ ವಿಶೇಷ ಗೌರವ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ತೆರಳಿ ಎಲ್ಲಾ ವಿಜ್ಞಾನಿಗಳು, ತಂತ್ರಜ್ಞರು ಸೇರಿದಂತೆ ಇತರೆ ಸಿಬ್ಬಂದಿಯನ್ನು ಅಭಿನಂದಿಸಿದರು.
    ಈ ವೇಳೆ ಮಾತನಾಡಿದ ಅವರು, ಐತಿಹಾಸಿಕ ಸಾಧನೆ ಮಾಡಿರುವ ಇವರುಗಳನ್ನು ಸತ್ಕರಿಸುವುದು ನಮ್ಮ ಹೆಮ್ಮೆ ಇದಕ್ಕಾಗಿ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಗೌರವಿಸಲಾಗುತ್ತದೆ ಎಂದರು.

    ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆಪ್ಟೆಂಬರ್ 02 ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದು ಹೇಳಿದರು.
    ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ . ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದು ತಿಳಿಸಿದರು.

    ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ.ಅವರೆಲ್ಲರನ್ನೂ ಸನ್ಮಾನಿಸಲಾಗುವುದು.3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ.
    ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಇಸ್ರೋ ವಿಜ್ಞಾನಿಗಳ ಎಲ್ಲಾ ಪ್ರಯತ್ನಕ್ಕೆ ಸರ್ಕಾರದ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.

    ನಮ್ಮ ಹೆಮ್ಮೆ:

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ,60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆಎಂದು ಸಂತಸ ವ್ಯಕ್ತಪಡಿಸಿದರು.
    ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ ಭಾರತದ ಎಲ್ಲಾ ಭಾಗಗಳಿಂದ ಬಂದಂತಹ ವಿಜ್ಞಾನಿಗಳ ಪರಿಶ್ರಮವಿದೆ. ಭಾರತ ಮತ್ತೊಮ್ಮೆ ಜಗತ್ತಿಗೆ ತನ್ನ ಶಕ್ತಿ ಸಾಮರ್ಥ್ಯವನ್ನು ಪರಿಚಯಿಸಿದೆ. ಕನ್ನಡಿಗರ ಪರಿಶ್ರಮ ಇದರಲ್ಲಿ ಹೆಚ್ಚಿದ್ದು, ಕನ್ನಡಿಗನಾಗಿ ನನಗೆ ಹೆಮ್ಮೆಯ ವಿಚಾರ” ಎಂದು ಹೇಳಿದರು.

     

     

    ALSO READ – LATEST KANNADA NEWS

    ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling

    #kannada #siddaramaiah art gold ISRO kannada news m News Varthachakra vidhana soudha ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email
    Previous Articleಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    Next Article ನಿರುದ್ಯೋಗಿ ಪತಿಗೆ ಬುದ್ಧಿ ಕಲಿಸಲು ಹೋಗಿ ತಗಲ್ಕೊಂಡಾ ಪತ್ನಿ | Bengaluru
    vartha chakra
    • Website

    Related Posts

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe