Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸದ್ಗುರು Jaggi Vasudevಗೆ ತೀವ್ರ ಹಿನ್ನಡೆ?
    ಧಾರ್ಮಿಕ

    ಸದ್ಗುರು Jaggi Vasudevಗೆ ತೀವ್ರ ಹಿನ್ನಡೆ?

    vartha chakraBy vartha chakraಜನವರಿ 15, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು –
    ಸಿಲಿಕಾನ್ ಸಿಟಿ ಬೆಂಗಳೂರಿಗೆ ಅನತಿ‌ ದೂರದ ಚಿಕ್ಕಬಳ್ಳಾಪುರದ ಆವಲಗುರ್ಕಿಯಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಈಶ ಪ್ರತಿಷ್ಠಾನ ನಿರ್ಮಿಸಿರುವ ಭವ್ಯವಾದ “ಆದಿಯೋಗಿ’ ಪ್ರತಿಮೆ ಲೋಕಾರ್ಪಣೆಯಾಗುತ್ತಿದೆ.
    ಈ ಅದ್ದೂರಿ ಸಮಾರಂಭವನ್ನು ಉಪ ರಾಷ್ಟ್ರಪತಿ ಉದ್ಘಾಟಿಸಬೇಕಿತ್ತು.ಆದರೆ, ಕೊನೆಯ ಕ್ಷಣದಲ್ಲಿ ಅವರು ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ .ಇದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಉಪ ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಯಾಕೆ ಬರುತ್ತಿಲ್ಲ ಎನ್ನುವುದನ್ನು ಹೇಳುತ್ತೇವೆ.
    ಚಿಕ್ಕಬಳ್ಳಾಪುರ ಸಮೀಪದಲ್ಲಿ ಕೊಯ ಮತ್ತೂರಿನ ಆದಿಯೋಗಿಯನ್ನೇ ಹೋಲುವ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ಧವಾಗಿದೆ. ಈಗಾಗಲೇ ಯೋಗಲಿಂಗೇಶ್ವರ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದಿದೆ. ಜಗ್ಗಿ ವಾಸುದೇವ್ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿದವರು ಹೀಗಾಗಿ ತಮ್ಮ ಪೂರ್ವಿಕರ ಊರಿನ ಸಮೀಪದಲ್ಲಿ ‌ಮಹತ್ವಾಕಾಂಕ್ಷೆಯ ಆದಿಯೋಗಿ,ಯೋಗ ಲಿಂಗೇಶ್ವರ ಮತ್ತು ಆದಿನಾಗನನ್ನು ಪ್ರತಿಷ್ಟಾಪಿಸಿದ್ದು, ಅಂತರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ನಿರ್ಮಿಸುತ್ತಿದ್ದಾರೆ.ಇದಕ್ಕಾಗಿ ರೈತರಿಂದ ನೂರಾರು ಎಕರೆ ಭೂಮಿ ಖರೀದಿಸಿದ್ದಾರೆ.
    ಕೊಯಮತ್ತೂರು ಸಮೀಪದ ಈಶ ಪ್ರತಿಷ್ಠಾನದ ಆಶ್ರಮ ಕೆಲವು ವಿವಾದಗಳಿಂದಾಗಿ ಸರ್ಕಾರದ ಕೆಂಗಣ್ಣಿಗೆ ಕಾರಣವಾಗಿದೆ. ಹೀಗಾಗಿ ವಿವಾದಗಳಿಂದ ದೂರ ಉಳಿಯಲು ಬಯಸಿರುವ ಜಗ್ಗಿ ವಾಸುದೇವ್ ‌ಚಿಕ್ಕಬಳ್ಳಾಪುರ ಸಮೀಪದಲ್ಲಿ ಅಂತರಾಷ್ಟ್ರೀಯ ಕೇಂದ್ರ ನಿರ್ಮಿಸುತ್ತಿದ್ದಾರೆ.ಇದು ರಾಜಧಾನಿ ಬೆಂಗಳೂರಿನಿಂದ ಕೆಲವೇ ಕಿಲೋಮೀಟರ್ ದೂರದಲ್ಲಿದೆ ಅಲ್ಲದೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಸನಿಹದಲ್ಲೇ ಇದೆ.ಹೀಗಾಗಿ ಮಹತ್ವಾಕಾಂಕ್ಷೆಯೊಂದಿಗೆ ಈ ಕೇಂದ್ರ ನಿರ್ಮಿಸುತ್ತಿದ್ದಾರೆ. ಆದರೆ ಇದು ಕೂಡ ವಿವಾದದ ಸುಳಿಗೆ ಸಿಲುಕಿದೆ ಸರ್ಕಾರದ ನೆರವಿನ ಬಗ್ಗೆ ಅಪಸ್ವರ ಕೇಳಿಬಂದಿದೆ.
    ಇನ್ನೂ ಈ ಕೇಂದ್ರ ಸುಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟದ ಸಮೀಪದಲ್ಲಿ ಬರುತ್ತಿದೆ ಈ ಕೇಂದ್ರ ನಿರ್ಮಾಣಕ್ಕಾಗಿ ಕೆಲ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
    ನಂದಿ ಗಿರಿಧಾಮದ ಬೆಟ್ಟ ಸೇರಿದಂತೆ ನರಸಿಂಗ ದೇವರ ಬೆಟ್ಟಗಳ ಸಾಲುಗಳು ಈ ಭಾಗದ ಜಲ ಮೂಲಗಳಾಗಿದೆ.ಈ ಪ್ರದೇಶ ನರಸಿಂಹ ದೇವರ ವಲಯಕ್ಕೆ ಸೇರಿವೆ. ಈ ಬೆಟ್ಟಗಳ ಸಾಲಿನಲ್ಲಿ ಔಷಧ ಸಸ್ಯಗಳು ದಟ್ಟವಾಗಿವೆ. ಸಾಲು ಬೆಟ್ಟಗಳ ಮಧ್ಯಭಾಗದಲ್ಲಿ ಸೇರಿದ ಇಶಾ ಪ್ರತಿಷ್ಠಾನಕ್ಕೆ ಅರಣ್ಯ ಸೇರಿ ನಾನಾ ಕಾಯಿದೆಗಳನ್ನು ಉಲ್ಲಂಘಿಸಿ ವಾಣಿಜ್ಯ ಉದೇಶಕ್ಕಾಗಿ ಸರಕಾರಿ ಭೂಮಿ ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ
    ಯೋಗ ಕೇಂದ್ರ ನಿರ್ಮಾಣವಾಗುತ್ತಿರುವ ಇಡೀ
    ಪ್ರದೇಶವನ್ನು ಗ್ರೀನ್‌ ಬೆಲ್ಟ್‌ ಎಂದು ಘೋಷಣೆ ಮಾಡಲಾಗಿದ್ದು, ವಾಣಿಜ್ಯ ಚಟುವಟಿಕೆಗೆ ಅವಕಾಶವಿಲ್ಲ. ಆದರೂ ಸರಕಾರದ ಎ-ಖರಾಬು ಮತ್ತು ಬಿ-ಖರಾಬು ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುವುದಕ್ಕಾಗಿ ಜಿಲ್ಲಾಡಳಿತ ಹಸ್ತಾಂತರ ಮಾಡಿದೆ. ಇಲ್ಲಿ ಇಶಾ ಪ್ರತಿಷ್ಠಾನ ಕಾಮಗಾರಿ ಕೈಗೊಂಡಿದ್ದು, ಅದರಿಂದ ಸುತ್ತಮುತ್ತಲಿನ ಪರಿಸರ ಹಾಳಾಗಲಿದೆ ಎಂದು ಆರೋಪಿಸಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಲಾಗಿದೆ.
    ಈ ರೀತಿಯಲ್ಲಿ ವಿವಾದಕ್ಕೆ ಲಪಕಾರಣವಾದ ಕೇಂದ್ರವನ್ನು ಸಂವಿಧಾನ ರಕ್ಷಣೆಯ ಉನ್ನತ ಹುದ್ದೆಯಲ್ಲಿರುವ ತಾವು ಉದ್ಘಾಟಿಸುವುದು ಸರಿಯಲ್ಲ ಎಂದು ಭಾವಿಸಿದ ಉಪ ರಾಷ್ಟ್ರಪತಿ ಸಮಾರಂಭದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯನ್ನು ಜಗ್ಗಿ ವಾಸುದೇವ್ ಅವರ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

    ವಾಣಿಜ್ಯ ಸದ್ಗುರು
    Share. Facebook Twitter Pinterest LinkedIn Tumblr Email WhatsApp
    Previous Articleಅಣ್ಣಾಮಲೈ ಗೆ ಭಾರಿ ಭದ್ರತೆ
    Next Article ರಾಜ್ಯದಲ್ಲಿ BJPಗೆ ಬಹುಮತ- ಸಮೀಕ್ಷಾ ವರದಿ‌
    vartha chakra
    • Website

    Related Posts

    ಮಲಗಿದ್ದಲ್ಲೇ ಸುಟ್ಟು ಕರಕಲಾದರು

    ಆಗಷ್ಟ್ 16, 2025

    ಕೇಂದ್ರ ಆರೋಗ್ಯ ಮಂತ್ರಿಗೆ ದಿನೇಶ್ ಗುಂಡೂರಾವ್ ಪತ್ರ

    ಆಗಷ್ಟ್ 7, 2025

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ | Lokayukta
    • Connietaups ರಲ್ಲಿ ವಿದೇಶಿ ಗಿಫ್ಟ್ ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಜಯನಗರ ಮಹಿಳೆ | Jayanagar
    • Connietaups ರಲ್ಲಿ Fitness Trainer ಮಾಡಿದ ಘನಂದಾರಿ ಕೆಲಸ
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe