ಬೆಂಗಳೂರು
Congress ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ (Eshwar Khandre) ಅವರ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿ, ಕಲಾಪವನ್ನು ಅಲ್ಪಕಾಲಾವಧಿಗೆ ಮುಂದೂಡಲಾಯಿತು.
ಶೂನ್ಯವೇಳೆಯ ಕಲಾಪದಲ್ಲಿ ಸಭಾಧ್ಯಕ್ಷರು ಸೂಚನೆ ನೀಡಿದ ನಂತರವೂ ಏರು ದನಿಯಲ್ಲಿ ಖಂಡ್ರೆ ಮಾತನಾಡುವುದನ್ನು ಖಂಡಿಸಿದ ಸಭಾದ್ಯಕ್ಷರು, ‘ನಿಮ್ಮಂಥವರು ಆಯ್ಕೆಯಾಗಿ ಬರುವುದು ಈ ಸದನಕ್ಕೆ ಅವಮಾನ’ ಎಂದು ಹೇಳಿದರು.
ಸಭಾಧ್ಯಕ್ಷರ ಮಾತಿಗೆ ತೀವ್ರ ಆಕ್ಷೇಪಿಸಿದ ಕಾಂಗ್ರೆಸ್ ‘ಭಾಲ್ಕಿ ಜನರಿಗೆ ಮಾಡಿದ ಅವಮಾನವಿದು’ ಎಂದು ವಿರೋಧಿಸಿ ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಸದನ ಸಹಜ ಸ್ಥಿತಿಗೆ ಬಾರದ ಕಾರಣ ಸಭಾಧ್ಯಕ್ಷರು ಸದನದ ಕಾರ್ಯಕಲಾಪವನ್ನು ಕೆಲಕಾಲ ಕಾಲ ಮುಂದೂಡಿದರು.
ಆಗಿದ್ದೇನು?
ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ (U. T. Khader) ಅವರು, ‘ರಾಜ್ಯದಲ್ಲಿ ಇತ್ತೀಚೆಗೆ ಕೇಳಿಬರುತ್ತಿರುವ ದ್ವೇಷಭಾಷಣ ಕುರಿತಂತೆ ಪ್ರಸ್ತಾಪಿಸಿ, ಸಚಿವರು ಹಾಗೂ ಜನಪ್ರತಿನಿಧಿಗಳು ನೀಡುತ್ತಿರುವ ಹೇಳಿಕೆಗಳು ಅಶಾಂತಿಗೆ ಕಾರಣವಾಗುತ್ತಿವೆ’ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr C N Ashwath Narayan) ಅವರು ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡರು.
‘ನನಗೆ ಯಾರನ್ನೂ ವೈಯಕ್ತಿಕವಾಗಿ ಅಗೌರವಿಸುವ ಹಾಗೂ ಟೀಕೆ ಮಾಡುವ ಉದ್ದೇಶವಿಲ್ಲ. ಕೇವಲ ರಾಜಕೀಯ ಭಾಷಣ ಮಾಡಿದ್ದೇನೆಂದು’ ಸ್ಪಷ್ಟಪಡಿಸಿದರು.
ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯು.ಟಿ.ಖಾದರ್, ಕೃಷ್ಣಬೈರೇಗೌಡ (Krishna Byre Gowda), ತನ್ವೀರ್ ಸೇಠ್ (Tanveer Seth), ಪ್ರಿಯಾಂಕ ಖರ್ಗೆ (Priyank M. Kharge), ಈಶ್ವರಖಂಡ್ರೆ ಮತ್ತಿತರರು, ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಚಿವರ ಉತ್ತರ ಹಾರಿಕೆಯಾಗಿದೆ. ಆರೋಪಿ ಸ್ಥಾನದಲ್ಲಿ ಇರುವವರಿಂದ ಇನ್ನೇನು ಉತ್ತರ ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ಆರಂಭಿಸಿದರು. ಆಗ ಸದನದಲ್ಲಿ ಗದ್ದಲದ ವಾತಾವರಣ ಉಂಟಾಯಿತು.
ಗದ್ದಲದ ನಡುವೆಯೇ ಅಶ್ವತ್ಥನಾರಾಯಣ ತಮ್ಮ ನಿಲುವನ್ನು ಸಮರ್ಥಿಸುತ್ತಾ, ಉತ್ತರಿಸುತ್ತಿದ್ದಾಗ ಈಶ್ವರ ಖಂಡ್ರೆ ಏರಿದ ಧ್ವನಿಯಲ್ಲಿ ಮಾತನಾಡಿದರು. ಇದು ಸಭಾಧ್ಯಕ್ಷರನ್ನು ಕೆರಳಿಸಿತು. ಮಾತು ನಿಲ್ಲಿಸಿ ಕೂರುವಂತೆ ಅವರಿಗೆ ತಾಕೀತು ಮಾಡಿದರೂ, ಪದೇ ಪದೇ ಕುಳಿತುಕೊಳ್ಳಿ ಎಂದು ಸೂಚನೆ ನೀಡಿದ ಹೊರತಾಗಿಯೂ, ಖಂಡ್ರೆ ಮಾತನಾಡುವುದನ್ನು ನಿಲ್ಲಿಸಲಿಲ್ಲ.
ಇದರಿಂದ ಸಹನೆ ಕಳೆದುಕೊಂಡ ಕಾಗೇರಿ ಅವರು, ‘ನೀವು ಹಿರಿಯರು, ಈ ರೀತಿ ನಡೆದುಕೊಳ್ಳುವುದು ನಿಮಗೆ ಶೋಭೆ ತರುವುದಿಲ್ಲ. ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಸಭಾಧ್ಯಕ್ಷರು ಹೇಳಿದ ಮೇಲೂ ನೀವು ಪೀಠಕ್ಕೆ ಗೌರವ ಕೊಡದೆ ಮಾತನಾಡುತ್ತಿದ್ದೀರಿ. ಇದೇನಾ ನೀವು ಸಭಾಧ್ಯಕ್ಷರಿಗೆ ಕೊಡುವ ಗೌರವ’ ಎಂದು ಪ್ರಶ್ನಿಸಿದರು.
‘ನಾನು ಇದುವರೆಗೆ ಸಹನೆ ಕಳೆದುಕೊಳ್ಳದೇ ಮಾತನಾಡಿದ್ದೇನೆ. ಪೂರ್ಣ ಅಧಿಕಾರ ಚಲಾಯಿಸುವ ಅವಕಾಶ ಮಾಡಿಕೊಡಬೇಡಿ. ನನ್ನನ್ನು ಅನಗತ್ಯವಾಗಿ ಎಳೆದು ಮಾತನಾಡಿಸುತ್ತೀರಿ. ಕೇಳುವ ಸೌಜನ್ಯವಿಲ್ಲವೆ? ಪದೇ ಪದೇ ಇದೇ ರೀತಿ ಮುಂದುವರೆದರೆ, ಸದನದಿಂದ ಹೊರ ಹಾಕಬೇಕಾಗುತ್ತದೆ’ ಎಂದು ಸಭಾಧ್ಯಕ್ಷರು ಎಚ್ಚರಿಕೆ ನೀಡಿದರು.
10 ಪ್ರತಿಕ್ರಿಯೆಗಳು
Все актуальные промокоды в одном месте. Все актуальные промокоды в одном месте. .
Переезд в Испанию Переезд в Испанию .
электрокарнизы электрокарнизы .
вывод из запоя на дому в ростове вывод из запоя на дому в ростове .
выведение из запоя воронеж стационар выведение из запоя воронеж стационар .
выведение из запоя санкт петербург https://www.vyvod-iz-zapoya-v-sankt-peterburge.ru .
нарколог вывод из запоя http://vyvod-iz-zapoya-v-sankt-peterburge.ru/ .
снятие ломки клинике снятие ломки клинике .
семена почтой с бесплатной доставкой по россии semenaplus74.ru .
купить семена интернет магазин россия https://semenaplus74.ru/ .