ಕರಾವಳಿ ರಾಜಕೀಯದ ಭೀಷ್ಮ ಎಂದೇ ಖ್ಯಾತರಾಗಿದ್ದ ಎ ಜಿ ಕೊಡ್ಗಿ ಅವರು ತಮ್ಮ 93 ನೇ ವಯಸ್ಸಿನಲ್ಲಿ ಇಂದು (ಜೂನ್ 13) ರಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಅವರು ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಐವರು ಪುತ್ರರು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ.
1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು ಸ್ವಾತಂತ್ರ್ಯ ಹೋರಾಟದ ಛಾಯೆಯಲ್ಲಿ ಬೆಳೆದವರು. ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಕಾನೂನು ಪದವೀಧರರು. ವಕೀಲ ವೃತ್ತಿಯಲ್ಲಿದ್ದ ಇವರು ಕೃಷಿ ಕಾಯಕದಲ್ಲಿಯೇ ತೊಡಗಿಸಿಕೊಂಡರು. ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ಮೂಲಕ ತನ್ನೂರನ್ನು ಅಭಿವೃದ್ದಿ ಪತದತ್ತ ಕೊಂಡೊಯ್ದವರು.
1972ರಿಂದ 1984 ರ ವರೆಗೆ ಬೈಂದೂರು ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಮಂಗಳೂರು ಜಿಲ್ಲಾ ಪರಿಷತ್ ಸದಸ್ಯರಾಗಿ, ಆರ್ಥಿಕ ಸಮಿತಿಯ ಸದಸ್ಯರಾಗಿ, ರಾಜ್ಯ ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ, ನಂತರ ಕಾರ್ಯಪಡೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಜಿಲ್ಲಾಧ್ಯಕ್ಷರಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿ ಸೇವೆ ಸಲ್ಲಿಸಿದ ಕೀರ್ತಿ ಕೊಡ್ಗಿ ಅವರಿಗೆ ಸಲ್ಲುತ್ತದೆ. 2013 ರಲ್ಲಿ ರಾಜಕೀಯ ನಿವೃತ್ತಿ ಹೊಂದಿ ಸಂಪೂರ್ಣ ಗ್ರಾಮ ಸೇವೆಯಲ್ಲಿ ತನ್ನನ್ನ ತೊಡಗಿಸಿಕೊಂಡಿದ್ದರು.
ಕರಾವಳಿ ರಾಜಕಾರಣದ ಭೀಷ್ಮ ಎ.ಜಿ ಕೊಡ್ಗಿ ಇನ್ನಿಲ್ಲ
Previous Articleಕಿಮ್ಸ್ ನಲ್ಲಿ ಕೈಯಲ್ಲಿದ್ದ ಮಗುವನ್ನು ಕದ್ದೊಯ್ದರಂತೆ!
Next Article ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಯುವ ಕಾಂಗ್ರೆಸ್ ಅಧ್ಯಕ್ಷ!