Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಓಮಿನಿ ಟ್ರೇಲರ್ ಬಿಡುಗಡೆ
    ಸುದ್ದಿ

    ಓಮಿನಿ ಟ್ರೇಲರ್ ಬಿಡುಗಡೆ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಓಮಿನಿ ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ “ಓಮಿನಿಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ‌ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.
    ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ ಓಮಿನಿ ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು. ಇವರೆಲ್ಲಾ ಬಂದು ನನ್ನನ್ನು ಸಮಾರಂಭಕ್ಕೆ ಆಹ್ವಾನಿಸಿದಾಗ ಬರಲ್ಲ ಎಂದು ಹೇಳಲು ಆಗಲಿಲ್ಲ. ಅವರೆಲ್ಲರ ಪ್ರೀತಿ ನನ್ನ ಇಲ್ಲಿಯವರೆಗೂ ಕರೆತಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾರೈಸಿದರು.
    ಓಮಿನಿ ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ ಓಮಿನಿ ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 19 ರಂದು ಚಿತ್ರ ತೆರೆಗೆ ಬರಲಿದೆ‌. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಸನ್ಮಾನ್ಯ‌ ಗೃಹ ಸಚಿವರು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನನ್ನ ಬಾಯಲ್ಲಿ ಪದಗಳೇ ಹೊರಡುತ್ತಿಲ್ಲ.‌ ಗೃಹ ಸಚಿವರಿಗೆ ಎಷ್ಟು ಕಾರ್ಯದೊತ್ತಡ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ಬಿಡುವಿಲ್ಲದ ಕಾರ್ಯದೊತ್ತಡದ ನಡುವೆ ಈ ಕಾರ್ಯಕ್ರಮಕ್ಕೆ ಬಂದು ಹಾರೈಸಿರುವುದು ತುಂಬಾ ಸಂತೋಷವಾಗುತ್ತಿದೆ. ನಾನು ನಿರ್ದೇಶನದೊಂದಿಗೆ ಹಲವು ಜವಾಬ್ದಾರಿ ಹೊತ್ತುಕೊಂಡಿದ್ದೀನಿ. ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೀನಿ ಎಂದರು ನಿರ್ದೇಶಕ ಮಂಜು ಹೆದ್ದೂರ್.
    ಇದೊಂದು ವಿಭಿನ್ನ ಕಥೆಯ ಚಿತ್ರ. ಚಿತ್ರವೊಂದರಲ್ಲಿ ಚಿತ್ರವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಲವ್, ಸಸ್ಪೆನ್ಸ್, ಹಾರಾರ್ ಎಲ್ಲಾ‌ ಅಂಶಗಳು ನಮ್ಮ ಚಿತ್ರದಲ್ಲಿದೆ.‌ ನಮ್ಮ ಚಿತ್ರದಲ್ಲಿ “ಓಮಿನಿ” ಪ್ರಮುಖಪಾತ್ರ ವಹಿಸುತ್ತದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ‌. ಅತೀ ದೊಡ್ಡದಾದ ದಾವಣಗೆರೆಯ ಗ್ಲಾಸ್ ಹೌಸ್ ನಲ್ಲಿ ಚಿತ್ರೀಕರಣವಾಗಿರುವುದು ವಿಶೇಷ. ಆಗಸ್ಟ್ 19 ರಂದು ರಾಜ್ಯಾದ್ಯಂತ “ಓಮಿನಿ” ಸಂಚಾರ ಆರಂಭವಾಗಲಿದೆ. ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ನೋಡಿ. ಹಾರೈಸಿ ಎಂದರು ನಾಯಕ ಸಿದ್ದು ಮೂಲಿಮನಿ.
    ಹಲವು ವರ್ಷಗಳ ನಂತರ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದೇನೆ. ಒಳ್ಳೆಯ ಪಾತ್ರ‌ ನೀಡಿದ್ದಾರೆ.‌ ನಾನು ಮಲೆನಾಡ ಹುಡುಗಿ. ಅದೇ ಊರಿನ ಹುಡುಗಿ ಪಾತ್ರ ಸಿಕ್ಕಿರುವುದು ಖುಷಿಯಾಗಿದೆ ಎಂದರು ನಾಯಕಿ ಅಶ್ವಿನಿ ಚಂದ್ರಶೇಖರ್.
    ಗೀತರಚನೆಕಾರ ಪ್ರಮೋದ್ ಮರವಂತೆ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು “ಓಮಿನಿ” ಬಗ್ಗೆ ಮಾತನಾಡಿದರು.
    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ರವಿಸಿಂಗ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
    ಶ್ರೀ ಬೆಳ್ಳುಡಿ ಫಿಲಂಸ್ ಹಾಗು ಎಸ್ ಆರ್ ಗ್ರೂಪ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮಂಜು ಹೆದ್ದೂರ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ನಿರ್ದೇಶನ ಹಾಗು ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ.
    ಸಿದ್ದು ಮೂಲಿಮನಿ, ಪೂಜಾ ಜನಾರ್ದನ, ಅಶ್ವಿನಿ ಚಂದ್ರಶೇಖರ್, ಭರತ್‌ ಬೋಪ್ಪಣ್ಣ, ಮಂಜು ಹೆದ್ದೂರ್, ಆಕಾಂಕ್ಷ ಪಟಮಕ್ಕಿ, ಮೋಹನ್ ಜುನೇಜ, ಪ್ರಕಾಶ್ ತುಮ್ಮಿನಾಡು, ಮನಸ್ವಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Verbattle
    Verbattle
    Verbattle
    cinema Entertainment kannada cinema Movies ಕಾರು ಚಲನಚಿತ್ರ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಎರಡನೇ ಮಹಿಳಾ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು
    Next Article ರೈತ ವಿರೋಧಿ ಕಾನೂನುಗಳೇ ಹೆಚ್ಚಾಗ್ತಿವೆ: ಭಾಸ್ಕರ್ ರಾವ್
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michealactip ರಲ್ಲಿ ಅಗ್ನಿ ಅವಘಡದಿಂದ ತಪ್ಪಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ | Koramangala Fire
    • reklamnii kreativ_ovor ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • Georgemen ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.