Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆ ಸಲ್ಲಿಕೆಗೆ ಜಮೀರ್ ಗೆ ಎಸಿಬಿ ಸೂಚನೆ
    ಸುದ್ದಿ

    ದಾಖಲೆ ಸಲ್ಲಿಕೆಗೆ ಜಮೀರ್ ಗೆ ಎಸಿಬಿ ಸೂಚನೆ

    vartha chakraBy vartha chakraಜುಲೈ 11, 2022Updated:ಜುಲೈ 11, 20221 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ನಿವಾಸದ ಮೇಲೆ ಕಳೆದ ವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
    ದಾಳಿ ವೇಳೆ ಜಮೀರ್​ ಆದಾಯಕ್ಕಿಂತ ಎರಡು ಸಾವಿರ ಪಟ್ಟು ಜಾಸ್ತಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 87 ಕೋಟಿ ಹೆಚ್ಚುವರಿ ಆಸ್ತಿಯ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
    ದಾಳಿ ನಡೆದ ಮಾರನೇ ದಿನವೇ ಕಚೇರಿಗೆ ಬಂದು ದಾಖಲೆ ಒದಗಿಸುವಂತೆ ಎಸಿಬಿ ಅಧಿಕಾರಿಗಳು ತಿಳಿಸಿದ್ದು, ಬಕ್ರೀದ್​ ಕಾರಣ ನೀಡಿ ಜಮೀರ್​ ಕಾಲಾವಕಾಶ ಪಡೆದಿದ್ದರು. ಸದ್ಯ ಬಕ್ರೀದ್​ ಮುಗಿದ ಕಾರಣ ಜಮೀರ್​ ದಾಖಲೆ ಸಮೇತ ಎಸಿಬಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ.
    ಈ ನಡುವೆ ಆದಾಯಕ್ಕಿಂತ ಶೇ.2031 ಪಟ್ಟು ಹೆಚ್ಚು ಅಕ್ರಮ ಆಸ್ತಿಯನ್ನು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಖಾನ್‌ ಸಂಪಾದಿಸಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು.
    ಇಡಿ ವರದಿ ಆಧರಿಸಿ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ, ಜಮೀರ್‌ ಅವರ ಸಾಮ್ರಾಜ್ಯದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ಜಪ್ತಿ ಮಾಡಿತ್ತು. ಜಮೀರ್‌ ಅವರು .87.44 ಕೋಟಿ (ಶೇ.2031) ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಇಡಿ ಉಲ್ಲೇಖಿಸಿದ್ದು, ಈ ವರದಿ ಆಧರಿಸಿ ಶಾಸಕರ ವಿರುದ್ಧ ತನಿಖೆ ನಡೆಸಲು ಮುಂದಾಗಿದೆ.
    ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣ ಸಮೀಪ ಬಂಬೂ ಬಜಾರ್‌ನಲ್ಲಿರುವ ಜಮೀರ್‌ ಅವರ ವೈಭವೋಪೇತ ಮನೆ, ಸದಾಶಿವ ನಗರದಲ್ಲಿರುವ ಅತಿಥಿ ಗೃಹ, ಕಲಾಸಿಪಾಳ್ಯದಲ್ಲಿನ ಅವರ ಒಡೆತನದ ನ್ಯಾಷನಲ್‌ ಟ್ರಾವೆಲ್ಸ್‌ ಕಂಪನಿಯ ಕಚೇರಿ, ಓಕಾ ಅಪಾರ್ಚ್‌ಮೆಂಟ್‌ ಫ್ಲ್ಯಾಟ್‌ ಹಾಗು ಬನಶಂಕರಿಯ ಜಿ.ಕೆ.ಅಸೋಸಿಯೇಟ್ಸ್‌ ಕಚೇರಿ ಸೇರಿ ಐದು ಸ್ಥಳಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ಐಎಂಐ ಬಹುಕೋಟಿ ವಂಚನೆ ಪ್ರಕರಣದ ತನಿಖೆ ವೇಳೆ ಶಾಸಕ ಜಮೀರ್‌ ಅವರ ಆಸ್ತಿ ಬಗ್ಗೆ ಇಡಿ ಪತ್ತೆ ಹಚ್ಚಿತ್ತು.
    ಆಸ್ತಿಯ ಶೋಧ:
    ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ತನಿಖೆ ಮುಂದುವರೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಈಗ ಜಮೀರ್‌ ಅವರ 16 ವರ್ಷ ಶಾಸಕರಾಗಿರುವ ಅವಧಿಯಲ್ಲಿ ಗಳಿಸಿದ ಸಂಪತ್ತಿನ ಬಗ್ಗೆ ಶೋಧನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
    2006ರಲ್ಲಿ ಉಪಚುನಾವಣೆ ಮೂಲಕ ಮೊದಲ ಬಾರಿಗೆ ಚಾಮರಾಜಪೇಟೆ ಕ್ಷೇತ್ರದ ಶಾಸಕರಾದ ಜಮೀರ್‌, ಅಂದಿನಿಂದ ಸತತವಾಗಿ ನಾಲ್ಕು ಬಾರಿ ಚುನಾಯಿತರಾಗಿದ್ದಾರೆ. ತಮ್ಮ ಶಾಸಕ ಸ್ಥಾನ ಬಳಸಿಕೊಂಡು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಎಸಿಬಿ ಅನುಮಾನಿಸಿದೆ. ಈ ಹಿನ್ನೆಲೆಯಲ್ಲಿ 2006ರ ಚುನಾವಣೆಗೆ ಸ್ಪರ್ಧಿಸಿದಾಗ ಸಲ್ಲಿಸಿದ್ದ ಆಸ್ತಿ ಪ್ರಮಾಣವನ್ನು ಕಲೆ ಹಾಕಿರುವ ಎಸಿಬಿ, ಆ ಮಾಹಿತಿ ಆಧರಿಸಿ ಈಗಿನ ಸಂಪತ್ತಿನ ಮೌಲ್ಯವರ್ಧನೆ ಮಾಡುತ್ತಿದೆ ಎನ್ನಲಾಗಿದೆ.
    ಶಾಸಕರಾಗುವ ಮುನ್ನವೇ ಸಾರಿಗೆ (ನ್ಯಾಷನಲ್‌ ಟ್ರಾವೆಲ್ಸ್‌ ಏಜೆನ್ಸಿ) ಹಾಗು ರಿಯಲ್‌ ಎಸ್ಟೇಟ್‌ ಸೇರಿದಂತೆ ಇತರೆ ಉದ್ಯಮದಲ್ಲಿ ಜಮೀರ್‌ ತೊಡಗಿದ್ದರು. ನ್ಯಾಷನಲ್‌ ಟ್ರಾವೆಲ್ಸ್‌ ದೇಶ ವ್ಯಾಪ್ತಿ ಸಂಪರ್ಕ ಜಾಲ ಹೊಂದಿದೆ. ಅಲ್ಲದೆ ಅಗರ್ಭ ಶ್ರೀಮಂತಿಕೆಗೆ ಜಮೀರ್‌ ಹೆಸರು ವಾಸಿಯಾಗಿದ್ದರು. ಶಾಸಕ ಸ್ಥಾನ ಅವರ ಸಾರಿಗೆ ಹಾಗು ರಿಯಲ್‌ ಎಸ್ಟೇಟ್‌ ಸೇರಿದಂತೆ ಸ್ವಂತ ವ್ಯವಹಾರಗಳ ಬೆಳವಣಿಗೆಗೆ ನೆರವಾಗಿದೆಯೇ ಎಂಬುದು ಎಸಿಬಿ ತನಿಖೆಗೆ ಒಳಪಡಿಸಿದೆ. ತಮ್ಮ ಶಾಸಕ ಸ್ಥಾನ ದುರ್ಬಳಕೆ ಮಾಡಿದರೆ ಚುನಾಯಿತ ಪ್ರತಿನಿಧಿ ಕಾಯ್ದೆಯಡಿ ಕ್ರಮ ಜರುಗಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
    ಲೆಕ್ಕ ಪರಿಶೋಧನೆ:
    ಜಮೀರ್‌ ಅವರು ದಾಳಿ ವೇಳೆ ತಮ್ಮ ಆಸ್ತಿ ಪಾಸ್ತಿ ಕುರಿತು ಸತ್ಯಾಸತ್ಯತೆ ಪರಿಶೀಲನೆಗೆ ಪ್ರತ್ಯೇಕವಾಗಿ ಲೆಕ್ಕಪರಿಶೋಧನೆಗೆ ಎಸಿಬಿ ಕಳುಹಿಸಿದೆ ಎಂದು ಮೂಲಗಳು ಹೇಳಿವೆ.

    Verbattle
    Verbattle
    Verbattle
    Government Politics ಕಲೆ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಪ್ರಾಪ್ತೆಯ ಮೇಲೆ ಅತ್ಯಾಚಾರಾವೆಸಗಿದ ಕಾಮುಕನಿಗೆ 20 ವರ್ಷ ಜೈಲು
    Next Article ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ : Online ವಂಚನೆ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • arenda_asSn ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • arenda_thSn ರಲ್ಲಿ 600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.