ಬಾಹುಬಲಿ ಸಿನಿಮಾ ಬಿಜ್ಜಳದೇವನ ಪಾತ್ರದಲ್ಲಿ ಖ್ಯಾತರಾದ ಹಿರಿಯ ಕಲಾವಿದ ನಾಸರ್ ಶೂಟಿಂಗ್ ವೇಳೆ ಕಣ್ಣಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದಿನ ಪೊಲೀಸ್ ಅಕಾಡಮಿಯಲ್ಲಿ ನಡೆದ ಶೂಟಿಂಗ್ ವೇಳೆ ಮೆಟ್ಟಿಲಿನಿಂದ ಬಿದ್ದ ನಾಸರ್ ಅವರಿಗೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಶೂಟಿಂಗ್ ನಲ್ಲಿ ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಭಾಗಿ ಆಗಿದ್ದರು. ಘಟನೆ ಬಗ್ಗೆ ಚಿತ್ರತಂಡದವರು ಅಥವಾ ನಾಸರ್ ಕುಟುಂಬದವರು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ. ನಾಸರ್ ನಟನಾಗಿ ಮಾತ್ರವಲ್ಲದೇ ನಾಸರ್ ಡಬ್ಬಿಂಗ್ ಆರ್ಟಿಸ್ಟ್ ಆಗಿ, ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ.