ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ , ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಲೆಹರ್ಸಿಂಗ್ ಹಾಗು ಜೈರಾಮ್ ರಮೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ್ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಜಯ ಸಾಧಿಸಿದ್ದರು. ನಿರ್ಮಲಾ ಸೀತಾರಾಮನ್ ಅವರಿಗೆ 46 ಮತಗಳು, ಜಗ್ಗೇಶ್ಗೆ 44 ಮತಗಳು, ಲೆಹರ್ ಸಿಂಗ್ಗೆ 33 ಮತಗಳು ಸಿಕ್ಕಿತ್ತು.
ಇನ್ನು ರಾಜ್ಯದ ಇನ್ನೋರ್ವ ಸದಸ್ಯ ಲೆಹರ್ ಸಿಂಗ್ ಕೂಡ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಗಮನ ಸೆಳೆದರು.