ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ ‘FOG HERO ಅವಾರ್ಡ್’ ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು ಈ ಬಾರಿ ಕನ್ನಡ ಚಿತ್ರನಟಿ ಮೇಘನಾ ರಾಜ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಅವರು ಆಗಸ್ಟ್ 21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ ‘ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿ ಇದೆ ಎಂದು ನಟಿ ಹೇಳಿದ್ದಾರೆ. ಮಗನ ಆರೈಕೆ ಜೊತೆಗೆ ಮೇಘನಾ ಎರಡು ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಕಾಂತ ಕನ್ನಲ್ಲಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ಶಬ್ಬ’ ಹಾಗು ಇನ್ನೂ ಹೆಸರಿಡದ ವಿಶಾಲ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಈ ಪೈಕಿ ವಿಶಾಲ್ ನಿರ್ದೇಶನದ ಚಿತ್ರವನ್ನು ಪನ್ನಗಭರಣ ಹಾಗು ಮೇಘನಾ ರಾಜ್ ಜಂಟಿಯಾಗಿ ನಿರ್ಮಿಸಲಿದ್ದಾರೆ.
Previous Articleಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್: ಕೊಲೆಗೆ ಶಫೀಕ್ ಮನೆಯಲ್ಲೇ ರೆಡಿಯಾಗಿತ್ತು ಸ್ಕೆಚ್
Next Article ಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ