ಬೆಂಗಳೂರು, ಆ.5-ಖಚಿತವಾದ ಮಾಹಿತಿಯನ್ನು ಆಧರಿಸಿ ನಗರದಲ್ಲಿ ಕಾರ್ಯಾಚರಣೆ ಕೈಗೊಂಡ ಡಿಆರ್ಐ ಅಧಿಕಾರಿಗಳು ಮೊದಲ ಬಾರಿಗೆ ಅತೀ ಹೆಚ್ಚು ಮೌಲ್ಯದ ಹೆರಾಯಿನ್ ಜಪ್ತಿ ಮಾಡಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ನಗರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ 112 ಕೋಟಿ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಜೊತೆಗೆ ತಮಿಳುನಾಡಿನ ತೇಲಿ ಮೂಲದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ.
ದಕ್ಷಿಣ ಆಫ್ರಿಕಾದ ಇಥ್ಯೂಪಿಯಾದಿಂದ ಹೆರಾಯಿನ್ ತೆಗೆದುಕೊಂಡು ಬಂದಿದ್ದ ಆರೋಪಿ, ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸಿಟಿ ರೈಲ್ವೆ ಸ್ಟೇಷನ್ಗೆ ಹೊರಟಿದ್ದ.
ಬೆಂಗಳೂರಿನಿಂದ ದೆಹಲಿಗೆ ತಲುಪಿಸಲು ಸಂಚು ಮಾಡಿಕೊಂಡಿದ್ದ. ಈ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು ಸಿಟಿ ರೈಲ್ವೆ ಸ್ಟೇಷನ್ ಬಳಿ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಜೊತೆಗೆ 112 ಕೋಟಿ ಮೌಲ್ಯದ 16 ಕೆಜಿ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.
ಸಿಟಿ ರೈಲ್ವೆ ನಿಲ್ದಾಣದಲ್ಲಿ 112 ಕೋಟಿ ಮೌಲ್ಯದ ಹೆರಾಯಿನ್ ವಶ
Previous Articleಮಳೆಗೆ ಮಾರಣ ಹೋಮವಾದ ಕೋಳಿಗಳು
Next Article ಯುವಕನ ಕಿರುಕುಳ ಬಿಚ್ಚಿಟ್ಟ ದಕ್ಷಿಣದ ಖ್ಯಾತ ನಟಿ