ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ ‘777 ಚಾರ್ಲಿ’ ಸಿನಿಮಾವು ಯಶಸ್ವಿಯಾಗಿ 25 ದಿನ ಪೂರೈಸಿದೆ. ಆ ಹಿನ್ನೆಲೆಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ಕಲೆಕ್ಷನ್ ಬಗ್ಗೆಯೂ ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. ಈವರೆಗೂ ‘777 ಚಾರ್ಲಿ’ ಸಿನಿಮಾ ಮಾಡಿರುವ ಬ್ಯುಸಿನೆಸ್ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ರಕ್ಷಿತ್ ಶೆಟ್ಟಿ ನೀಡಿದ್ದಾರೆ. ಜೊತೆಗೆ ನಿಮಾರ್ಪಕರಿಗೆ ಈ ಸಿನಿಮಾದಿಂದ ಸಿಗುವ ಹಣವೆಷ್ಟು ಎನ್ನುವುದರ ಕುರಿತಾಗಿಯೂ ರಕ್ಷಿತ್ ತಿಳಿಸಿದ್ದಾರೆ. ಪ್ರತಿಯೊಂದು ರಾಜ್ಯದಲ್ಲೂ ‘777 ಚಾರ್ಲಿ’ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಿದೆ. ಬೇರೆ ಬೇರೆ ಭಾಷೆಗಳಿಂದ ಓಟಿಟಿ ಮತ್ತು ಸ್ಯಾಟಲೈಟ್ ಹಕ್ಕುಗಳಿಗೆ ಉತ್ತಮ ಬೇಡಿಕೆ ಬರುತ್ತಿದೆ. ಎಲ್ಲ ಗಳಿಕೆಯನ್ನು ಬೇರೆ ಬೇರೆಯಾಗಿ ಹೇಳುವುದಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ, ‘777 ಚಾರ್ಲಿ’ ಸಿನಿಮಾ ಸುಮಾರು 150 ಕೋಟಿ ರೂಪಾಯಿ ವ್ಯವಹಾರ ಮಾಡಿದೆ. ಇದರಲ್ಲಿ ಸುಮಾರು 90ರಿಂದ 100 ಕೋಟಿ ರೂ.ಗಳಷ್ಟು ಹಣ ನಿರ್ಮಾಪಕರ ಕೈಗೆ ಬರುತ್ತದೆ..’ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದೇ ವೇಳೆ ‘ 777 ಚಾರ್ಲಿ ಗಳಿಸಿರುವ ಲಾಭದಲ್ಲಿ ಶೇಕಡ 5ರಷ್ಟು ಪಾಲನ್ನು ನಿರಾಶ್ರಿತ ಶ್ವಾನಗಳ ಹಾಗು ಮೂಕಪ್ರಾಣಿಗಳ ರಕ್ಷಣೆ ಮತ್ತು ಪೋಷಣೆಗೆ ಸಮರ್ಪಿತವಾಗಿ ದೇಶಾದ್ಯಂತ ಕೆಲಸ ಮಾಡುತ್ತಿರುವ ಎನ್ಜಿಒಗಳಿಗೆ ತಲುಪಿಸಲು ನಾವು ನಿರ್ಧರಿಸಿದ್ದೇವೆ. ನಮ್ಮ ಈ ಅಳಿಲು ಸೇವೆ ಇನ್ನಿತರರಿಗೆ ಸ್ಫೂರ್ತಿಯಾಗಬಹುದು. ನಮ್ಮ ಜಗತ್ತನ್ನು ನಿಮ್ಮ ಪ್ರೀತಿಯಿಂದ ಬೆಳಗಿಸಿದ್ದಕ್ಕಾಗಿ ತಮ್ಮೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು’ ಎಂದು ರಕ್ಷಿತ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.