ಬೆಂಗಳೂರು : ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಕೊನೆಗೂ ಪೊಲೀಸರು ಹಳ್ಳ ಹಿಡಿಸಿದ್ದಾರೆ. ಇದು ನಿರೀಕ್ಷಿತ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೆಲವೇ ದಿನಗಳ ಹಿಂದಷ್ಟೆ ಸಂತೋಷ್ ಪತ್ನಿ ತನಿಖೆ ನ್ಯಾಯಯುತವಾಗಿ ನಡೆಯುತ್ತಿಲ್ಲ, ಪ್ರಕರಣದ ಪ್ರಮುಖ ಆರೋಪಿ ಈಶ್ವರಪ್ಪರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರಿದ್ದರು. ಕೊನೆಗೂ ಅದು ನಿಜವಾಗಿದೆ ಎಂದಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸಂತೋಷ್, ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದಿದ್ದರು. ಡೆತ್‌ನೋಟ್ ಪ್ರಬಲವಾದ ಸಾಕ್ಷಿ. ಆದರೆ ಉಡುಪಿ ಪೊಲೀಸರು ಈಶ್ವರಪ್ಪರ ವಿಚಾರಣೆಯನ್ನೇ ನಡೆಸಿಲ್ಲ. ಪ್ರಕರಣದ ಪ್ರಮುಖ ಆರೋಪಿ ಈಶ್ವರಪ್ಪರನ್ನು ವಿಚಾರಣೆ ನಡೆಸದೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ನ್ಯಾಯಸಮ್ಮತ ತನಿಖೆಯೆ.? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ 40% ಕಮೀಷನ್ ದಂಧೆಗೆ ಅಮಾಯಕ ಸಂತೋಷ್ ಜೀವ ಕಳೆದುಕೊಂಡರು. ಆದರೆ ಸಂತೋಷ್ ಆತ್ಮಹತ್ಯೆಗೆ ಶರಣಾದ ತಕ್ಷಣವೇ ಸ್ವತಃ ಮುಖ್ಯಮಂತ್ರಿಗಳೇ ಈಶ್ವರಪ್ಪರಿಗೆ ಕ್ಲೀನ್‌ಚಿಟ್ ಕೊಟ್ಟು ಈಶ್ವರಪ್ಪರನ್ನು ರಕ್ಷಿಸುವ ಕೆಲಸ ಮಾಡಿದರು. ಒಬ್ಬ ಮುಖ್ಯಮಂತ್ರಿಯೇ ಆರೋಪಿಯ ರಕ್ಷಣೆಗೆ ನಿಂತ ಮೇಲೆ, ಪೊಲೀಸರು ಪಾರದರ್ಶಕ ತನಿಖೆ ನಡೆಸಲು ಸಾಧ್ಯವೇ.?ಎಂದಿದ್ದಾರೆ.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೊಲೀಸರಿಂದ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗಲು ಸಾಧ್ಯವಿಲ್ಲ. ಸರ್ಕಾರ ತನ್ನ ಮೇಲಿನ 40% ಕಮೀಷನ್ ಆರೋಪದಿಂದ ಪಾರಾಗಲು ಈ ಪ್ರಕರಣದಲ್ಲಿ ’ಬಿ ರಿಪೋರ್ಟ್’ ಸಲ್ಲಿಸುವಂತೆ ಮಾಡಿದೆ. ಇದು 40% ಸರ್ಕಾರ ಅಲ್ಲ ಎಂದು ಸಾಬೀತುಪಡಿಸುವ ಇರಾದೆಯಿದ್ದರೆ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಆಗ್ರಹಿಸಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

