ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿವೆ.ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿರುವ ನಾಯಕತ್ವ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊರೆ ಹೊಕ್ಕಿದೆ.
ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಜೊತೆಗೆ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಈ ಪ್ರವಾಸಕ್ಕೆ ಹೈಕಮಾಂಡ್ ತಡೆಯೊಡ್ಡಿತ್ತು. ಇದರಿಂದ ಬೇಸರಗೊಂಡ ಯಡಿಯೂರಪ್ಪ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಯಡಿಯೂರಪ್ಪ ಈ ರೀತಿಯಲ್ಲಿ ಅಂತರ ಕಾಯ್ದುಕೊಂಡರೆ ಚುನಾವಣೆಯಲ್ಲಿ ದೊಡ್ಡ ಪರಿಣಾಮ ಬೀರಲಿದೆ ಎಂಬ ವರದಿಗಳು ಹೈಕಮಾಂಡ್ ತಲುಪಿದ್ದವು.
ಇದರಿಂದ ಎಚ್ಚೆತ್ತಿರುವ ಹೈಕಮಾಂಡ್ ಇದೀಗ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಹಸಿರು ನಿಶಾನೆ ತೋರಿದೆ. ಆದರೆ ಅದಕ್ಕೆ ಕೆಲವು ಷರತ್ತು ವಿಧಿಸಿದೆ. ಮೊನ್ನೆ ನಡೆದ ಚಿಂತನಾ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಿದ್ದು, ಯಡಿಯೂರಪ್ಪ ಅವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯ ಪ್ರವಾಸ ಮಾಡಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ.
ಅದರಂತೆ ಸರ್ಕಾರದ ಸಾಧನಾ ಸಮಾವೇಶಗಳಲ್ಲಿ ಯಡಿಯೂರಪ್ಪ ಜತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.
ಇದರ ಮೊದಲ ಸಭೆ ಜುಲೈ 21ಕ್ಕೆ ಮಂಡ್ಯದಲ್ಲಿ ನಡೆಯಲಿದೆ.
ಅಂದು ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್. ಪೇಟೆಯಲ್ಲಿ 1500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಕೆ.ಆರ್. ಪೇಟೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೂ ಬಿಜೆಪಿ ಸಿದ್ದತೆ ಮಾಡಿದೆ. ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ.ಇದೇ ವೇಳೆ ಕೆಆರ್ ಎಸ್ ಹಾಗು ಕಬಿನಿ ಜಲಾಶಯಕ್ಕೆ ಇಬ್ಬರೂ ನಾಯಕರು ಬಾಗಿನ ಅರ್ಪಿಸಲಿದ್ದಾರೆ.
ಬಿಎಸ್ ವೈ ರಾಜ್ಯ ಪ್ರವಾಸಕ್ಕೆ ಅಸ್ತು.. ಆದರೂ..!
Previous Articleಅಚ್ಚೇ ದಿನ್ ಬಂದೇ ಬಿಟ್ಟಿದೆ…?
Next Article ಜುಲೈ 20ಕ್ಕೆ ಕಾವೇರಿ ಮಾತೆಗೆ ಸಿಎಂ ಬಾಗಿನ…