ಬೆಂಗಳೂರು, ಆ. 12- ರಾಜ್ಯ ಹೈಕೋರ್ಟ್ ಎಸಿಬಿ ರದ್ದು ಮಾಡಿರುವ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿದ್ದೇವೆ. ಬಿಜೆಪಿ ಪಕ್ಷದ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗೆ ಬದ್ಧವಾಗಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದ್ದಾರೆ.
ಸಂಪುಟ ಸಭೆಯ ನಂತರ ಸಂಸದೀಯ ವ್ಯವಹಾರಗಳ ಸಂಸ್ಥೆ ಮತ್ತು ಭಾಷಾಂತರ ಇಲಾಖೆ ಹೊರತಂದಿರುವ ಕನ್ನಡ ಕಾನೂನು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಎಸಿಬಿ ರದ್ದು ಮಾಡುವ ಬಗ್ಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ
ತಿಳಿಸಲಾಗಿತ್ತು ಎಂದು ಹೇಳಿದರು.
ಈ ವಿಚಾರ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಈಗ ನ್ಯಾಯಾಲಯವೇ ಎಸಿಬಿಯನ್ನು ರದ್ದುಗೊಳಿಸಿದೆ. ಹಾಗಾಗಿ ನಮ್ಮ ಪ್ರಣಾಳಿಕೆಗೆ ಬದ್ಧರಾಗಿ ತೀರ್ಮಾನ ಮಾಡುತ್ತೇವೆ ಎಂದರು.
ಎಸಿಬಿ ರದ್ಧತೆ ಬಗ್ಗೆ ನ್ಯಾಯಾಲಯ ನೀಡಿರುವ ತೀರ್ಪನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ಕಾನೂನು ಸಚಿವ ಮಾಧುಸ್ವಾಮಿ ಮತ್ತು ಅಡ್ವೋಕೇಟ್ ಜನರಲ್ ಅವರಿಗೆ ಹೇಳಿದ್ದೇವೆ. ಇವರು ಕೊಡುವ ವರದಿ ಆಧರಿಸಿ ತೀರ್ಮಾನಗಳು ಆಗುತ್ತವೆ ಎಂದರು
ಎಸಿಬಿ ರದ್ಧತಿ ಬಗ್ಗೆ ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಅವರು ಹೇಳಿದರು.
Previous Articleನಕಲಿ ಮೊಮ್ಮಗಳನ್ನು ಬ್ಯಾಂಕ್ ಗೆ ಕರೆತಂದು 5 ಲಕ್ಷ ದೋಚಿದ ದಂಪತಿ
Next Article ACB ರದ್ದು ಸ್ವಾಗತಾರ್ಹ: ಸಂತೋಷ್ ಹೆಗ್ಡೆ