ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶ ನಿರ್ಧರಿಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಫಲಿತಾಂಶ ಪ್ರಕಟಿಸಿದ್ದಾರೆ.
ಸಿಇಟಿ ಪರೀಕ್ಷೆಯಲ್ಲಿ ಯುವಕರೇ ಮೇಲುಗೈ ಸಾಧಿಸಿದ್ದಾರೆ. ಅಪೂರ್ವ ಟಂಡನ್ ಸಿಇಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಶೇಕಡ 97 ಅಂಕ ಗಳಿಸಿ ಮೊದಲ ಸ್ಥಾನ ಪಡೆದಿದ್ದಾರೆ. ಅಪೂರ್ವ ಯಲಹಂಕ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದಿದ್ದರು.
ಪಶು ವೈದ್ಯಕೀಯ ಶಾಸ್ತ್ರದಲ್ಲಿ ಹೃಷಿಕೇಶ್ ಪ್ರಥಮ ರಾಂಕ್ ಪಡೆದುಕೊಂಡಿದ್ದರೆ, ಮನೀಶ್ ದ್ವಿತೀಯ ರಾಂಕ್ ಗಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್‌ನಲ್ಲಿ ಫಲಿತಾಂಶ ದೊರೆಯಲಿದೆ. ಎರಡು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಫಸ್ಟ್
Previous Articleಅರಗ ವಿರುದ್ಧ ಆಕ್ರೋಶ: ಪೊಲೀಸ್ ಲಾಠಿ ರುಚಿ
Next Article ಸಂಸದರಿಗೆ ಹೂಗುಚ್ಚ ನೀಡಲು ಬಂದವರು ಅರೆಸ್ಟ್..!