ಬೆಂಗಳೂರು,ಜು.12- ನಗರದ ಈದ್ಗಾ ಮೈದಾನದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಇಂದು ಕರೆ ನೀಡಲಾಗಿದ್ದ ಚಾಮರಾಜಪೇಟೆ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಾಮರಾಜಪೇಟೆ ನಾಗರೀಕರ ಒಕ್ಕೂಟದಿಂದ ಕರೆ ನೀಡಿದ ಬಂದ್ ಗೆ
ಆಜಾದ್ ನಗರ, ಗೋರಿಪಾಳ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ, ಚಾಮರಾಜಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಾಮರಾಜಪೇಟೆ ನಾಗರಿಕ ವೇದಿಕೆ ಹಾಗೂ ಇತರ ಹಿಂದುತ್ವದ ಪರವಾದ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆ ಈದ್ಗಾ ಮೈದಾನದಲ್ಲಿ ಜಮಾಯಿಸಿ ಪ್ರತಿಭಟನೆಗೆ ಮುಂದಾದಾಗ ಭದ್ರತೆ ಕೈಗೊಂಡಿದ್ದ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.
ಇದರಿಂದಾಗಿ ಪ್ರತಿಭಟನಾಕಾರರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು ಕೊನೆಗೆ ಪ್ರತಿಭಟನಾಕಾರರ ಮನವೊಲಿಸಿ ಮೈದಾನದಲ್ಲಿದ್ದವರನ್ನು ತೆರವುಗೊಳಿಸಲಾಯಿತು.
ಈ ನಡುವೆ ಬಂದ್ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಸುತ್ತಮುತ್ತದ ಕೆಲವು ಖಾಸಗಿ ಶಾಲಾ-ಕಾಲೇಜುಗಳು ಮುಚ್ಚಿದ್ದವು
ಕೆಲವೆಡೆ ಅಂಗಡಿ-ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಲಾಯಿತು.
ಮೈದಾನದ ಸುತ್ತಮುತ್ತ ಹಾಗೂ ಚಾಮರಾಜಪೇಟೆಯ ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದ ವರದಿಗಳು ಬಂದಿಲ್ಲ.
ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ಸಂಬರಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿವಾದಿತ ಸ್ಥಳವಾದ ಈದ್ಗಾ ಮೈದಾನದಲ್ಲೂ ಹೆಚ್ಚುವರಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಂದ್ ನಿಂದ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಸಂಪೂರ್ಣ ಬಂದ್ಗೆ ಕರೆ ನೀಡಿದ್ದರಿಂದ, ಹಾಲು, ತರಕಾರಿ, ಮೆಡಿಕಲ್ ಬಿಟ್ಟು ಬಹುತೇಕ ಅಂಗಡಿಗಳು ಬಂದ್ ಆಗಲಿವೆ.
ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈದ್ಗಾ ಮೈದಾನದಲ್ಲಿ 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Previous Articleಕಾರು ಹೊಳೆಗೆ ಬಿದ್ದ ಪ್ರಕರಣ; ಇಬ್ಬರ ಮೃತದೇಹ ಪತ್ತೆ
Next Article ಸೆಂಚುರಿ ಸ್ಟಾರ್ ಬರ್ತಡೇ: ಶಿವಣ್ಣ ಸಿನಿಮಾಗಳ ಅಪ್ಡೇಟ್!