ನವದೆಹಲಿ: ಮಾರಕ ಕೊರೋನಾ ಸೋಂಕಿನ ಪ್ರಮಾಣ ದೇಶದಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ಎಂಬುದನ್ನು ಅಂಕಿ ಅಂಶಗಳು ಸಾರಿ ಹೇಳುತ್ತಿವೆ.
ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,935 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ 16,069 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ 51 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಆತಂಕ ಸೃಷ್ಟಿಸಿದೆ.
ದೇಶದಲ್ಲಿನ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,44,264 ಆಗಿದೆ. ಪಾಸಿಟಿವಿಟಿ ದರ ಶೇಕಡ 6.48ಕ್ಕೆ ತಲುಪಿದೆ. ಇದು ಕಳವಳಕ್ಕೆ ಕಾರಣವಾಗಿದೆ.