Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ಹಿಡಿದ ಪತ್ನಿ ATM ಅಲ್ಲ…!
    ಸುದ್ದಿ

    ಕೈ ಹಿಡಿದ ಪತ್ನಿ ATM ಅಲ್ಲ…!

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.19-ಯಾವುದೇ ಭಾವನಾತ್ಮಕ ಸಂಬಂಧವಿಲ್ಲದೇ ಪತ್ನಿಯನ್ನು ಹಣ ನೀಡುವ ಹಸು ಅಥವ ಎಟಿಎಂನಂತೆ ನಡೆಸಿಕೊಳ್ಳುವುದು ಮಾನಸಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
    ಅಲ್ಲದೆ, ಪ್ರಕರಣದಲ್ಲಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿ ಮಹಿಳೆಗೆ ಗಂಡನಿಂದ ವಿಚ್ಛೇದನ ನೀಡಿದ್ದು,
    ಪತಿಯಿಂದ ವಿಚ್ಛೇದನ ನೀಡದ ಕೌಟುಂಬಿಕ ಕೋರ್ಟ್​ ಆದೇಶದ ವಿರುದ್ಧ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
    ಪತಿ ಮಹಿಳೆಯೊಂದಿಗೆ ಯಾವುದೇ ಭಾವನಾತ್ಮಕ ಬಾಂಧವ್ಯವನ್ನು ಹೊಂದಿಲ್ಲ. ಕೇವಲ ಯಾಂತ್ರಿಕವಾಗಿ ಪತಿಯ ಪಾತ್ರವನ್ನು ಪೋಷಿಸಿದ್ದಾರೆ. ವ್ಯಾಪಾರ ನಡೆಸುವ ನೆಪದಲ್ಲಿ ಪತ್ನಿಯಿಂದ 60 ಲಕ್ಷ ರೂಗಳನ್ನು ಪತಿ ಪಡೆದುಕೊಂಡಿದ್ದಾರೆ. ಆಕೆಯನ್ನು ಆತ ಕೇವಲ ಹಣ ನೀಡುವ ಎಟಿಎಂ ಆಗಿ ಬಳಸಿಕೊಂಡಿದ್ದಾರೆ. ಗಂಡನ ಈ ವರ್ತನೆಯಿಂದ ಹೆಂಡತಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ಇದು ಮಾನಸಿಕ ಕಿರುಕುಳಕ್ಕೆ ಸಮವಾಗುತ್ತದೆ ಎಂದು ಕೋರ್ಟ್​ ಹೇಳಿದೆ.
    ಈ ಪ್ರಕರಣದಲ್ಲಿ ಪತಿಯಿಂದ ಪತ್ನಿಗೆ ಆಗಿರುವ ನೋವು, ಮಾನಸಿಕ ಕಿರುಕುಳ ಎಂದು ಪರಿಗಣಿಸಬಹುದು. ಕೌಟುಂಬಿಕ ನ್ಯಾಯಾಲಯ ಈ ಎಲ್ಲ ಅಂಶಗಳನ್ನು ಪರಿಗಣಿಸಲು ವಿಫಲವಾಗಿದೆ. ಇದಲ್ಲದೇ, ನ್ಯಾಯಾಲಯವು ಮಹಿಳೆಯನ್ನು ಪೂರ್ಣ ವಿಚಾರಿಸದೇ ಕೇವಲ ಹೇಳಿಕೆಗಳನ್ನು ಮಾತ್ರ ದಾಖಲಿಸಿದೆ ಎಂದಿದೆ.
    ವಿಚ್ಛೇದನಕ್ಕೆ ಅಸ್ತು:
    ನೊಂದ ಪತ್ನಿಯ ವಾದವನ್ನು ಪರಿಗಣಿಸಿರುವ ನ್ಯಾಯಾಲಯ ಅವರಿಗೆ ವಿಚ್ಛೇದನ ದಯಪಾಲಿಸಿದೆ. ಕೌಟುಂಬಿಕ ಕಲಹದ ಪ್ರಕರಣಗಳಲ್ಲಿ ಕ್ರೌರ್ಯದ ಆರೋಪಗಳನ್ನು ಪ್ರಕರಣದ ಅರ್ಹತೆಯ ಮೇಲೆ ಪರಿಶೀಲಿಸಬೇಕು ಎಂದು ಪೀಠವು ಒತ್ತಿಹೇಳಿದೆ.
    ಪ್ರಕರಣದ ವಿವರ:
    1991 ರಲ್ಲಿ ವಿವಾಹವಾದ ದಂಪತಿ 2001 ರಲ್ಲಿ ಹೆಣ್ಣು ಮಗುವನ್ನು ಹೊಂದಿದ್ದರು. ವ್ಯಾಪಾರ ನಡೆಸುತ್ತಿದ್ದ ಪತಿ ಸಾಲದ ಸುಳಿಗೆ ಸಿಲುಕಿದ್ದ. ಮರುಪಾವತಿಸಲು ಕಷ್ಟಪಡುತ್ತಿದ್ದರು. ಇದು ಮನೆಯಲ್ಲಿ ನಿತ್ಯ ಜಗಳಕ್ಕೆ ಕಾರಣವಾಗಿತ್ತು. ಈ ವೇಳೆ ಮಹಿಳೆ ಜೀವನಕ್ಕಾಗಿ ಬ್ಯಾಂಕ್‌ ಉದ್ಯೋಗಕ್ಕೆ ಸೇರಿಕೊಂಡಿದ್ದರು. 2008 ರಲ್ಲಿ ಹೆಂಡತಿ ತನ್ನ ಪತಿಗೆ ದುಬೈನಲ್ಲಿ ಸಲೂನ್​ ತೆರೆಯಲು 60 ಲಕ್ಷ ಹಣವನ್ನು ನೀಡಿದ್ದಾರೆ.
    ಆದರೆ, ನಷ್ಟಕ್ಕೀಡಾದ ಪತಿ ಭಾರತಕ್ಕೆ ವಾಪಸ್​ ಆಗಿದ್ದರು. ಹಣ ನೀಡಲು ಪೀಡಿಸುತ್ತಿದ್ದ ಪತಿಯಿಂದ ಮಹಿಳೆ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
    ಆದರೆ ಪ್ರಕರಣದಲ್ಲಿ ಯಾವುದೇ ತಿರುಳಿಲ್ಲ ಎಂದು ಕೋರ್ಟ್​ ಅರ್ಜಿ ವಜಾ ಮಾಡಿತ್ತು. ಇದರ ವಿರುದ್ಧ ಆ ಮಹಿಳೆಯು ಹೈಕೋರ್ಟ್​ ಮೊರೆ ಹೋಗಿದ್ದರು.

    Verbattle
    Verbattle
    Verbattle
    ATM Bangalore dubai Government high court ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡವರ ಅಪಮಾನ ಮಾಡಿದವ ಪೊಲೀಸ್ ಬಲೆಗೆ..
    Next Article ಗಿಣಿ ಹುಡುಕಿಕೊಟ್ಟವರಿಗೆ 50 ಸಾವಿರ ನಗದು ಬಹುಮಾನ ..!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Daviddek ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • aviator_sukr ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.