ಬೆಂಗಳೂರು : ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು’ ಎಂದು ಸಲಹೆ ಮಾಡಿದರು.
ಸಿದ್ದರಾಮಯ್ಯ ಹಾಗು ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ನಾನು ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ’ ಎಂಬ ಎಂ.ಬಿ. ಪಾಟೀಲ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ’ ಎಂದು ಪ್ರತಿಕ್ರಿಯಿಸಿದರು.
ನನ್ನ ಲೆವೆಲ್‌ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತು ಹೇಳುತ್ತಿದ್ದೇನೆ’ ಎಂದು ತಿಳಿಸಿದರು.
ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿ, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಇದೆಲ್ಲವನ್ನು ಬಿಜೆಪಿ ಹಾಗು ಬಿಜೆಪಿ ಸರ್ಕಾರವೇ ಅವರ ಮೂಲಕ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ’ ಎಂದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

