ಬೆಂಗಳೂರು,ಆ.5- ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಪಾಪಿ ತಾಯಿಯೊಬ್ಬಳು ತಾನು ಜನ್ಮಕೊಟ್ಟ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಮೃಗೀಯ ಕೃತ್ಯ ಸಂಪಂಗಿರಾಮನಗರದಲ್ಲಿ ನಡೆದಿದೆ.
ಸಂಪಂಗಿರಾಮನಗರದ ಅದಿತ್ವ ಅಪಾರ್ಟ್ಮೆಂಟ್ನ ಫ್ಲಾಟ್ ವೊಂದರಲ್ಲಿ ವಾಸಿಸುತ್ತಿದ್ದ ತಾಯಿಯಿಂದ ಕೊಲೆಯಾದ ಮಗುವನ್ನು ಜೀತಿ(4) ಎಂದು ಗುರುತಿಸಲಾಗಿದ್ದು ಕೃತ್ಯ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ರಕ್ಷಿಸಲಾಗಿದೆ.
ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಯಿಯ ಅಮಾನವೀಯ ಕೃತ್ಯ ಎಂತಹವರ ಮನಕಲುಕುವಂತಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
ಬುದ್ಧಿಮಾಂದ್ಯತೆಯ ಕಾರಣದಿಂದಾಗಿ ಮಗಳು ಜೀತಿಯನ್ನು ಸಾಕಲಾಗದೇ ತಾಯಿ ಇಂತಹ ಕೃತ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ನಲ್ಲಿ ತಾಯಿಯು ಮಗುವನ್ನು ಬಿಟ್ಟು ಬಂದಿದ್ದಳು. ತಂದೆ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಇದೀಗ ಮಗುವನ್ನು ಎಸೆದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯರು ಆಕೆಯನ್ನು ಕಾಪಾಡಿದ್ದಾರೆ.
ಮಹಿಳೆಯನ್ನು ಹತ್ಯೆ ಮಾಡಿದ ಮಹಿಳೆ ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದಳು. ಮೃತ ಮಗುವಿನ ತಂದೆ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರು.
ಪಾಪಿ ತಾಯಿ ವಿರುದ್ದ ಸಂಪಂಗಿರಾಮನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

