ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು ಕಚೇರಿ ಸಮಯದಲ್ಲಿ ಯಾವುದೇ ಫೋಟೋ ಹಾಗು ವಿಡಿಯೋಗಳನ್ನು ಚಿತ್ರೀಕರಿಸಲು ರಾಜ್ಯ ಸರ್ಕಾರ ನಿಷೇಧ ಹೇರಿದೆ.
ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲಿದೆ. ಸರ್ಕಾರಿ ಕಚೇರಿಯ ಅವಧಿಯಲ್ಲಿ ಫೋಟೋ ಹಾಗು ವಿಡಿಯೋಗಳನ್ನು ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದರಿಂದ ಸರ್ಕಾರಿ ಸಿಬ್ಬಂದಿಗೆ ಅದರಲ್ಲೂ ವಿಶೇಷವಾಗಿ ಮಹಿಳಾ ಸಿಬ್ಬಂದಿಗೆ ತೊಂದರೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.