ಬೆಂಗಳೂರು,ಜು.11– ರಿಯಲ್ ಎಸ್ಟೇಟ್ ಉದ್ಯಮಿಗೆ ಬೆದರಿಕೆ ಹಾಕುತ್ತಿದ್ದ ರೌಡಿಶೀಟರ್ ಬಾಂಬೆ ಸಲೀಂನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ಜೈಲ್ಲಿನಲ್ಲಿದ್ದ ಬಾಂಬೆ ಸಲೀಂ ತನ್ನ ಸಹಚರರ ಮೂಲಕ ಕಲಾಸಿಪಾಳ್ಯ ಉದ್ಯಮಿಗೆ ಬೆದರಿಕೆ ಹಾಕಿದ್ದ. ಪ್ರಕರಣ ಸಂಬಂಧ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಬಾಂಬೆ ಸಲೀಂನನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಹಳೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದಾರೆ.
ಇನ್ನು ಉದ್ಯಮಿಗೆ ಬೆದರಿಕೆ ಹಾಕಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸದೇ ನಿರ್ಲಕ್ಷ್ಯ ತೋರಿದ್ದ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ನ್ನು ಕರ್ತವ್ಯದಿಂದ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
Previous Articleವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ : Online ವಂಚನೆ
Next Article ಇವನು ಅಂತಿಂಥ ಕಳ್ಳ ಅಲ್ಲ… Hi-tech YouTube ಕಳ್ಳ..!!