ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗು ತುರ್ತು ಚಿಕಿತ್ಸಾ ಕೇಂದ್ರಕ್ಕೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನತೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹೋರಾಟಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ.
ಇದರಿಂದ ಬೆಚ್ಚಿದ ಸರ್ಕಾರ ಇದೀಗ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸುವ ಭರವಸೆ ನೀಡಿದೆ ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಸದ್ಯದಲ್ಲೇ ತುರ್ತು ಚಿಕಿತ್ಸಾ ಕೇಂದ್ರಸ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗು ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Previous Articleನಿವೃತ್ತಿ ಘೋಷಿಸಿದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್
Next Article ಸುಷ್ಮಿತಾ ಕನ್ನಡಕದೊಳಗೆ ಕಂಡದ್ದೇನು?